ಬೆಂಗಳೂರು: ಕಾಂಪೌಂಡ್ ಕುಸಿದು ಇಬ್ಬರು ಕಾರ್ಮಿಕರ ಸಾವು

ಕಾಂಪೌಂಡ್ ಕುಸಿದ ನಂತರ ಮಹಿಳೆ ಸೇರಿದಂತೆ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಭಾರತೀ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎಂಇಜಿ ಆಫೀಸರ್ಸ್ ಕಾಲೋನಿಯಲ್ಲಿ ಗುರುವಾರ ಸಂಜೆ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕಾಂಪೌಂಡ್ ಕುಸಿದ ನಂತರ ಮಹಿಳೆ ಸೇರಿದಂತೆ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಭಾರತೀ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎಂಇಜಿ ಆಫೀಸರ್ಸ್ ಕಾಲೋನಿಯಲ್ಲಿ ಗುರುವಾರ ಸಂಜೆ ನಡೆದಿದೆ. 

ಮೃತರನ್ನು ಚಿತ್ರದುರ್ಗದ ಚಳ್ಳಕೆರೆ ಮೂಲದ ಬಾಣಸವಾಡಿ ನಿವಾಸಿ ಆಶಮ್ಮ (21) ಮತ್ತು ಪಶ್ಚಿಮ ಬಂಗಾಳ ಮೂಲದ ಅಕ್ರಂ ಉಲ್ ಹಕ್ (22) ಎಂದು ಗುರುತಿಸಲಾಗಿದೆ. ಎಂಇಜಿ ಆಫೀಸರ್ಸ್ ಕಾಲೋನಿಯಲ್ಲಿ ಕಳೆದ 10 ದಿನಗಳಿಂದ ದುರಸ್ತಿ ಕಾರ್ಯ ನಡೆಯುತ್ತಿದ್ದು, ಗುರುವಾರ ಇಬ್ಬರೂ ಕಾಂಪೌಂಡ್‌ಗೆ ಪ್ಲಾಸ್ಟರ್‌ ಹಾಕುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ 6.30ರ ಸುಮಾರಿಗೆ ಆರು ಅಡಿಯ ಕಾಂಪೌಂಡ್ ಅವರ ಮೇಲೆ ಕುಸಿದು ಬಿದ್ದು ತಲೆಗೆ ಗಾಯವಾಗಿದೆ.  ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಆಶಮ್ಮ ದಾರಿಯಲ್ಲಿ ಸಾವನ್ನಪ್ಪಿದರು, ಅಕ್ರಂ ಉಲ್ ಹಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ನಿರ್ಲಕ್ಷ್ಯದ ಆರೋಪದ ಮೇಲೆ  ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದು ಆಸ್ಪತ್ರೆಗೆ ಬರುತ್ತಿದ್ದ ಆಶಾಮ್ಮ ಅವರ ಪತಿಗೂ ಅಪಘಾತಕ್ಕೆ ಸಿಲುಕಿದ್ದು ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com