ನಂದಿ ಗಿರಿಧಾಮ ಹೊಸ ವರ್ಷಾಚರಣೆಗೆ ನಿರ್ಬಂಧ! ಸಾರ್ವಜನಿಕರಿಗೆ ಪ್ರವೇಶ ಬಂದ್: ಜಿಲ್ಲಾಧಿಕಾರಿ ಆದೇಶ

ಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ತಿಳಿಸಿದ್ದಾರೆ.
ನಂದಿ ಗಿರಿಧಾಮ (ಸಂಗ್ರಹ ಚಿತ್ರ)
ನಂದಿ ಗಿರಿಧಾಮ (ಸಂಗ್ರಹ ಚಿತ್ರ)
Updated on: 

ಬೆಂಗಳೂರು: ಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ತಿಳಿಸಿದ್ದಾರೆ.

ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ (New Year 2023) ನಿರ್ಬಂಧ ಹೇರಲಾಗಿದೆ. ನಾಳೆ ಶನಿವಾರ ಡಿಸೆಂಬರ್ 31 ಸಂಜೆ 6 ಗಂಟೆಯಿಂದ ಜನವರಿ 1 ಬೆಳಗ್ಗೆ 6 ಗಂಟೆವರೆಗೂ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ (Chikkaballapur DC) ಎನ್.ಎಂ. ನಾಗರಾಜ್ ಆದೇಶ ಹೊರಡಿಸಿದ್ದಾರೆ. 

ಇದರಿಂದಾಗಿ ನಂದಿ ಹಿಲ್ಸ್​​ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ಅಂತೆಯೇ ಡ್ರಿಂಕ್ ಆಂಡ್ ಡ್ರೈವ್ ಅಪಘಾತ ಹಾಗೂ ಕೊರೊನಾ (Covid 19) ಹರಡದಂತೆ ತಡೆಯುವ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ. 

ಅಲ್ಲದೆ ನಂದಿಗಿರಿಧಾಮದಲ್ಲಿ ಡಿಸೆಂಬರ್​ 31ರಂದು ರೂಮ್ ಬುಕಿಂಗ್ ಸಹ ರದ್ದುಪಡಿಸಲಾಗಿದ್ದು, ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com