ವನ್ಯಜೀವಿಗಳು ಪತ್ತೆ ಪ್ರಕರಣ: ಜಾಮೀನು ಅರ್ಜಿ ಸಲ್ಲಿಸಿದ ಕಾಂಗ್ರೆಸ್ ನಾಯಕ ಎಸ್‌.ಎಸ್‌. ಮಲ್ಲಿಕಾರ್ಜುನ್

ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಒಡೆತನದ ಫಾರ್ಮ್ ಹೌಸ್‌ನಲ್ಲಿ ವನ್ಯಜೀವಿಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಎಸ್ ಎಸ್ ಮಲ್ಲಿಕಾರ್ಜುನ್
ಎಸ್ ಎಸ್ ಮಲ್ಲಿಕಾರ್ಜುನ್
Updated on

ದಾವಣಗೆರೆ: ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಒಡೆತನದ ಫಾರ್ಮ್ ಹೌಸ್‌ನಲ್ಲಿ ವನ್ಯಜೀವಿಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಡಿಸೆಂಬರ್ 21 ರಂದು ಸಿಸಿಬಿ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ನಡೆಸಿದ ದಾಳಿ ವೇಳೆ ಅನೇಕ ವನ್ಯಜೀವಿಗಳು ಪತ್ತೆಯಾಗಿದ್ದವು. ಪರವಾನಗಿ ಪಡೆಯದೇ ಸಾಕಣೆ ಮಾಡುತ್ತಿರುವುದು ಕಂಡು ಬಂದಿದ್ದು, ಅವೆಲ್ಲವುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸುಪರ್ದಿಗೆ ಪಡೆದುಕೊಂಡಿದ್ದರು.

ಬಳಿಕ 1972ರ ವನ್ಯಜೀವಿ (ರಕ್ಷಣೆ) ಕಾಯ್ದೆ ಅಡಿಯಲ್ಲಿ ಮಲ್ಲಿಕಾರ್ಜುನ್, ಮ್ಯಾನೇಜರ್, ಕೇರ್‌ಟೇಕರ್ ಮತ್ತು ತೋಟದ ಮನೆಯ ಇನ್ನೊಬ್ಬ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಮಲ್ಲಿಕಾರ್ಜುನ್ ಅವರು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ.

ಅವರು ದಾವಣಗೆರೆಯ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಅರ್ಜಿಯನ್ನು ಸ್ವೀಕರಿಸಿ ಜನವರಿ 2ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ. ಪ್ರಕರಣದಲ್ಲಿ ಮಲ್ಲಿಕಾರ್ಜುನ್ ಅವರನ್ನು ನಾಲ್ಕನೇ ಆರೋಪಿಯನ್ನಾಗಿ ಮಾಡಲಾಗಿದೆ.

ಪ್ರಕರಣದಲ್ಲಿ ಮಲ್ಲಿಕಾರ್ಜುನ್ ಹೆಸರನ್ನು ಅಧಿಕಾರಿಗಳು ಉಲ್ಲೇಖಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ, ನಾಲ್ಕನೇ ಆರೋಪಿಯನ್ನು ತೋಟದ ಮಾಲೀಕ ಎಂದು ನಮೂದಿಸಿದ್ದಾರೆ ಎನ್ನಲಾಗಿದೆ.

ತೋಟದ ಮನೆಯಿಂದ ರಕ್ಷಿಸಲಾದ ಬಹುತೇಕ ಪ್ರಾಣಿಗಳನ್ನು ಆನಗೋಡು ಮಿನಿ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿದೆ. ಆದರೆ, ಕೃಷ್ಣಮೃಗಗಳು ಮತ್ತು ಜಿಂಕೆಗಳು ಅತಿಸೂಕ್ಷ್ಮವಾಗಿರುವುದರಿಂದ ಅವುಗಳನ್ನು ಅಂಗಳದಲ್ಲಿ ಇರಿಸಲಾಗಿದ್ದು, ಶೀಘ್ರದಲ್ಲೇ ಪ್ರಾಣಿಸಂಗ್ರಹಾಲಯಗಳಿಗೆ ಸ್ಥಳಾಂತರಿಸಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಚ್.ಜಗನ್ನಾಥ್ ತಿಳಿಸಿದ್ದಾರೆ.

ದಾಳಿಯಲ್ಲಿ ಏಳು ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಸಿಕ್ಕಿವೆ.

ಮಲ್ಲಿಕಾರ್ಜುನ್ ಅವರ ಬಂಧನಕ್ಕೆ ಆಗ್ರಹಿಸಿ ಆಡಳಿತಾರೂಢ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಪ್ರಕರಣದಲ್ಲಿ ಅರಣ್ಯ ಇಲಾಖೆ ಅವರನ್ನು ನಂಬರ್ ಒನ್ ಆರೋಪಿಯನ್ನಾಗಿ ಮಾಡುವಂತೆ ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com