ಬೆಂಗಳೂರು: ಎರಡು ವರ್ಷಗಳ ಬಳಿಕ ಅತ್ಯಂತ ವಿಜೃಂಭಣೆ, ಮೋಜು-ಮಸ್ತಿಯೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದೆ.
ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ 2021 ಹಾಗೂ 2020ರ ಹೊಸ ವರ್ಷ ಸ್ವಾಗತ ಸಂಭ್ರಮಾಚರಣೆಗೆ ಪೂರ್ಣ ನಿರ್ಬಂಧ ಇತ್ತು. ಈ ಬಾರಿ ಮುಂಜಾಗ್ರತಾ ಕ್ರಮಗಳೊಂದಿಗೆ ಹೊಸವರ್ಷ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಶನಿವಾರ ಮಧ್ಯರಾತ್ರಿ 12ಕ್ಕೆ ಹೊಸ ವರ್ಷವನ್ನು ಸ್ವಾಗತಿಸಲು ಜನರು ತಮ್ಮ ಅಭಿರುಚಿಗೆ ತಕ್ಕಂತೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಬೆಂಗಳೂರಿನ ಹೊಸವರ್ಷ ಆಚರಣೆಯ ಕೇಂದ್ರ ಬಿಂದುವಾದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್'ಗೆ ಸಾರ್ವಜನಿಕರಿಗೆ ಕಳೆದೆರಡು ವರ್ಷಗಳ್ಲಿ ಡಿ.31 ಮಧ್ಯರಾತ್ರಿ ನಿರ್ಬಂಧ ವಿಧಿಸಲಾಗಿತ್ತು. ಆದರೆ, ಈ ಬಾರಿ ಅನುಮತಿ ನೀಡಲಾಗಿದ್ದು, ತಯಾರಿ ಜೋರಾಗಿದೆ.
ಈ ನಡುವೆ ಹೊಸ ವರ್ಷಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮಗಳ ಕೈಗೊಂಡಿದ್ದು, ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಸುರಕ್ಷಿತೆಯ ದೃಷ್ಟಿಯಿಂದ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಎಲ್ಲೆಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ..?. ಎಲ್ಲೆಲ್ಲಿ ಇಲ್ಲ ಎಂಬುದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಎಂಜಿ ರಸ್ತೆ ಸುತ್ತಮುತ್ತ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ.
ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿಯಲ್ಲಿ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ರೆಸ್ಟ್ ಹೌಸ್ ರಸ್ತೆ ಮತ್ತು ರೆಸಿಡೆನ್ಸಿ ರಸ್ತೆಗಳಲ್ಲಿ ಕರ್ತವ್ಯದಲ್ಲಿರುವ ಪೊಲೀಸ್ ಮತ್ತು ಅಗತ್ಯ ಸೇವೆಗಳ ವಾಹನಗಳನ್ನು ಹೊರತುಪಡಿಸಿ, ಇತರೆ ವಾಹನಗಳ ಸಂಚಾರಕ್ಕೆ ಈ ರಸ್ತೆಯಲ್ಲಿ ನಿರ್ಬಂಧ ಹೇರಲಾಗಿದೆ.
ಈ ರಸ್ತೆಗಳಲ್ಲಿ ಶನಿವಾರ ರಾತ್ರಿ 8 ರಿಂದ ಭಾನುವಾರ ಮಧ್ಯರಾತ್ರಿ 1 ರವರೆಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಭಾನುವಾರ ಮುಂಜಾನೆ 3 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನಗಳ ನಿಲುಗಡೆಯನ್ನೂ ನಿಷೇಧಿಸಲಾಗಿದೆ.
ಈ ರಸ್ತೆಗಳಲ್ಲಿ ಪ್ರವೇಶವಿಲ್ಲ...
ಈ ರಸ್ತೆಗಳಲ್ಲಿ ಪಾರ್ಕಿಂಗ್ ಇಲ್ಲ...
ಬದಲಿ ಮಾರ್ಗ
Advertisement