ಬೆಂಗಳೂರನ್ನು ಜಾಗತಿಕ ಗುಣಮಟ್ಟದ ನಗರವಾಗಿ ಅಭಿವೃದ್ಧಿ ಮಾಡಲು ಸರ್ಕಾರ ಬದ್ಧ: ಬಸವರಾಜ ಬೊಮ್ಮಾಯಿ

ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಗುಣಮಟ್ಟದ ನಗರವನ್ನಾಗಿ ಅಭಿವೃದ್ಧಿಪಡಿಸಲು ಹಾಗೂ ನಗರದ ಸಮಗ್ರ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಬೊಮ್ಮಾಯಿ
ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಗುಣಮಟ್ಟದ ನಗರವನ್ನಾಗಿ ಅಭಿವೃದ್ಧಿಪಡಿಸಲು ಹಾಗೂ ನಗರದ ಸಮಗ್ರ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೆಬ್ಬಾಳ ವಿಧಾನಸಭಾಕ್ಷೇತ್ರದ ಗಂಗಾನಗರದಲ್ಲಿ ಕೆಂಪೇಗೌಡ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕಾಲುವೆಗೆ 1600 ಕೋಟಿ ಕೊಟ್ಟಿದ್ದೇವೆ. ಸಬ್ ಅರ್ಬನ್ ಗೆ ಪ್ರಧಾನಿಗಳು ಅಡಿಗಲ್ಲು ಹಾಕಿದ್ದಾರೆ. ಫೆರಿಫರಲ್ ರಿಂಗ್ ರಸ್ತೆಗೂ ಮುಂದೆ ಅಡಿಗಲ್ಲು ಹಾಕುತ್ತೇವೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಗೆ ಒತ್ತು ನೀಡಲಾಗುವುದು. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದೇನೆ. ದೂರದೃಷ್ಟಿ ಮೂಲಕ ಮೂಲಭೂತ ಸೌಕರ್ಯ ಸಿಗಲು ನಾವೆಲ್ಲರೂ ಕೆಲಸ ಮಾಡುತ್ತಿದ್ದೇವ ಎಂದರು.

ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಹಿಂದಿನವರು ಬೆಂಗಳೂರು ಅಭಿವೃದ್ಧಿ ಮಾಡದ ಕಾರಣ ಹಲವು ಸಮಸ್ಯೆಗಳು ಸೃಷ್ಟಿಯಾಗಿವೆ. ಕಾಲಕಾಲಕ್ಕೆ ರಸ್ತೆ ಅಭಿವೃದ್ಧಿ, ರಾಜಕಾಲುವೆ ಸಮಸ್ಯೆ ಸರಿಪಡಿಸಿದ್ದರೆ ಈ ಸಮಸ್ಯೆಗಳು ಉದ್ಭವವಾಗುತ್ತಿರಲಿಲ್ಲ. ಇವಾಗ ನಾನು ರಸ್ತೆ, ರಾಜಕಾಲುವೆ ಅಭಿವೃದ್ಧಿ ಸವಾಲನ್ನು ಸ್ವೀಕಾರ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹೇಳಿದರು.

ಪಿ.ಎಸ್.ಆರ್. ಬಿಲ್ಡರ್, ಗ್ರಾಸ್ ರೂಟ್, ಎ.ಬಿ.ಎಸ್.ಎಸ್. ಇವರ ಸಹಭಾಗಿತ್ವದಲ್ಲಿ ಗಂಗಾನಗರದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತೋತ್ಸವ ಅಂಗವಾಗಿ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ವಿತರಿಸಿದರು.

ರಿಫೆರಲ್ ರಿಂಗ್ ರೋಡಿಗೆ ಟೆಂಡರ್ ಕರೆಯಲಾಗಿದೆ. ಈ ವರ್ಷ ಕಾಮಗಾರಿ ಪ್ರಾರಂಭವಾಗುತ್ತದೆ. ಮೆಟ್ರೋ ವಿಸ್ತರಣೆಯಾಗುತ್ತಿದೆ. ನಗರದ ಸೌಂದರ್ಯೀಕರಣಕ್ಕೆ ಕೆರೆಗಳ ಅಭಿವೃದ್ಧಿ ಕೈಗೊಳ್ಳಲಾಗಿದೆ. ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಬಡವರು ಇರುವ ಸ್ಥಳಗಳ ಅಭಿವೃದ್ಧಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅಭಿವೃದ್ಧಿ ಕೆಲಸಗಳ ಪಟ್ಟಿಯನ್ನೇ ನೀಡಿದರು.

ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಿ ಸಂಚಾರ ವ್ಯವಸ್ಥೆ ಯನ್ನು ಸುಗಮಗೊಳಿಸಲು ನಿರ್ದೇಶನ ನೀಡಿದ್ದೇನೆ. ಹತ್ತು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡು ಬೆಂಗಳೂರಿನ ಸಮಗ್ರ ಅಭಿವೃದ್ಧಿಯತ್ತ ನಡೆದಿದ್ದೇವೆ. ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ ಕ್ಕೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಮೂಲಭೂತ ಸೌಕರ್ಯ ಬೆಂಗಳೂರಿನ ನಾಗರಿಕರಿಗೆ ದೊರೆಯಬೇಕು ಎಂಬ ದೂರದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com