ಧಾರವಾಡದ 'ಕಿಲ್ಲರ್' ಹೆದ್ದಾರಿಗಳು: ಕ್ರಮ ಕೈಗೊಳ್ಳದ ಅಧಿಕಾರಿಗಳು, ಪ್ರಯಾಣಿಕರ ಆಕ್ರೋಶ

ಹುಬ್ಬಳ್ಳಿ-ಧಾರವಾಡ, ಕುಂದಗೋಳ, ಕಲಘಟಗಿ, ನವಲಗುಂದ, ಅಳ್ನಾವರ ರಸ್ತೆಗಳು ಪ್ರಯಾಣಿಕ ಸ್ನೇಹಿಯಾಗಿಲ್ಲ. ಪ್ರತಿನಿತ್ಯ ಅಪಘಾತಗಳು ಸಾಮಾನ್ಯವೆನಿಸಿದೆ. ಈ ರಸ್ತೆಗಳಲ್ಲಿ ಸಾವು-ನೋವುಗಳು ವರದಿಯಾಗುತ್ತಿವೆ. 
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ
Updated on

ಧಾರವಾಡ: ಹುಬ್ಬಳ್ಳಿ-ಧಾರವಾಡ, ಕುಂದಗೋಳ, ಕಲಘಟಗಿ, ನವಲಗುಂದ, ಅಳ್ನಾವರ ರಸ್ತೆಗಳು ಪ್ರಯಾಣಿಕರಿಗೆ ತೊಂದರೆಗಳನ್ನು ಆಹ್ವಾನಿಸುತ್ತಿವೆ. ಈ ರಸ್ತೆಗಳಲ್ಲಿ ಪ್ರತಿನಿತ್ಯ ಅಪಘಾತಗಳು ಸಾಮಾನ್ಯವಾಗಿವೆ. ಸಾವು-ನೋವುಗಳು ವರದಿಯಾಗುತ್ತಿವೆ. ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾಡಳಿತ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. 15 ದಿನಗಳ ಅವಧಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಈ  ಎಲ್ಲಾ ರಸ್ತೆಗಳಲ್ಲಿ ಇದು ಸಾಮಾನ್ಯವಾಗಿದೆ. ಚುನಾಯಿತ ಜನಪ್ರತಿನಿಧಿಗಳು ಇಂತಹ ರಸ್ತೆಗಳ ನಿರ್ವಹಣೆಗೆ ಕ್ರಮ ಕೈಗೊಳ್ಳದೆ ಬೇರೆ ಕೆಲಸಗಳಲ್ಲಿ ನಿರತರಾಗಿದ್ದಾರೆ.

ಸಾಮಾಜಿಕ ಹೋರಾಟಗಾರ ಶ್ರೀಶೈಲಗೌಡ ಕಮತರ ಮಾತನಾಡಿ, ‘ಹಿಂದೆ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯನ್ನು ಕಿಲ್ಲರ್ ರಸ್ತೆ ಎಂದು ಪರಿಗಣಿಸಲಾಗುತ್ತಿತ್ತು. ಆದರೆ ಈಗ ಜಿಲ್ಲೆಯ ಎಲ್ಲ ಹೆದ್ದಾರಿಗಳು ಇಂತಹ ಟ್ಯಾಗ್‌ಗೆ ಒಳಗಾಗುತ್ತಿವೆ. ಒಂದು ತಿಂಗಳ ಅವಧಿಯಲ್ಲಿ ವಿವಿಧ ಅಪಘಾತಗಳಲ್ಲಿ 18 ಜನರು ಸಾವನ್ನಪ್ಪಿದ್ದಾರೆ. ಬೆರಳೆಣಿಕೆಯಷ್ಟು ಜನರು ಗಾಯಗೊಂಡಿದ್ದಾರೆ.ಬಹುತೇಕ ರಸ್ತೆಗಳು ಹಾಳಾಗಿದ್ದು ಕಿರಿದಾದ ಮತ್ತಿತರ  ಸಮಸ್ಯೆಗಳಿಂದ ಅಪಘಾತಗಳಿಗೆ ಕಾರಣವಾಗುತ್ತಿವೆ  ಆದರೆ, ಬುದ್ಧಿವಂತ ಅಧಿಕಾರಿಗಳು ಸತ್ಯವನ್ನು ಮರೆಮಾಚುತ್ತಿದ್ದಾರೆ ಮತ್ತು ಚಾಲಕರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು. 

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಯರಿಕೊಪ್ಪ ಕ್ರಾಸ್ ಬಳಿ ಹಲವಾರು ಅಪಘಾತಗಳು ನಡೆಯುತ್ತಿದ್ದರೂ ಅಧಿಕಾರಿಗಳು ಅಪಘಾತಗಳನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ರಸ್ತೆಗೆ ಬಿಳಿ ಬಣ್ಣ ಬಳಿದಿದ್ದು ಬಿಟ್ಟರೆ ಏನೂ ಮಾಡಿಲ್ಲ. ವಾಹನಗಳ ವೇಗ ಮತ್ತು ಸಾಂದ್ರತೆಯನ್ನು ನಿಯಂತ್ರಿಸಲು ಏನೂ ಮಾಡಿಲ್ಲ ಎಂದು ಅವರು ಹೇಳಿದರು. 

ಮಳೆಯಿಂದ ರಸ್ತೆಗಳು ದೊಡ್ಡ ಪ್ರಮಾಣದಲ್ಲಿ ಹಾಳಾಗಿವೆ ಮತ್ತು ಕೋವಿಡ್ ಹರಡುವಿಕೆ ಮತ್ತು ಇತರ ಸಮಸ್ಯೆಗಳು ಕೆಲಸಕ್ಕೆ ಅಡ್ಡಿಯಾಗಿವೆ. ಕೆಲವು ರಸ್ತೆಗಳಲ್ಲಿ ಯಾವುದೇ ಪರ್ಯಾಯ ರಸ್ತೆಗಳಿಲ್ಲ ಮತ್ತು ಸಾಮಾನ್ಯ ಟ್ರಾಫಿಕ್ ಅನ್ನು ನಿರ್ವಹಿಸುವ ಮೂಲಕ ಅದನ್ನು ಸರಿಪಡಿಸಬೇಕಾಗಿದೆ. ಉದಾಹರಣೆಗೆ. ಕುಂದಗೋಳದಿಂದ ಹುಬ್ಬಳ್ಳಿಗೆ ಪರ್ಯಾಯ ರಸ್ತೆಯಿಲ್ಲ, ಅಂತಹ ಕಾಮಗಾರಿಗಳಿಗೆ ಸ್ವಲ್ಪ ಸಮಯ ಹಿಡಿಯುತ್ತದೆ. ರಸ್ತೆ ಬಳಕೆದಾರರಿಗೆ ಉತ್ತಮ ರಸ್ತೆ ಮತ್ತು ಸುರಕ್ಷಿತ ಪ್ರಯಾಣವನ್ನು ಒದಗಿಸುವ ಗುರಿಯನ್ನು ಇಲಾಖೆ ಹೊಂದಿದೆ ಎಂದು ಪಿಡಬ್ಲ್ಯೂಡಿ ಅಧಿಕಾರಿಯೊಬ್ಬರು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com