ರಾಜ್ಯಸಭೆಗೆ ನಾಮನಿರ್ದೇಶನ: ವೀರೇಂದ್ರ ಹೆಗ್ಗಡೆಗೆ ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರ ಅಭಿನಂದನೆ

ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ವೀರೇಂದ್ರ ಹೆಗ್ಗಡೆ, ಸಿಎಂ ಬೊಮ್ಮಾಯಿ
ವೀರೇಂದ್ರ ಹೆಗ್ಗಡೆ, ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಧರ್ಮ ಸಂರಕ್ಷಣೆ ಜೊತೆಗೆ ಶಿಕ್ಷಣ, ಆರೋಗ್ಯ ಕ್ಷೇತ್ರ ಸೇರಿದಂತೆ ಸಮಾಜ ನಿಷ್ಠರಾಗಿ ಅದ್ವಿತೀಯ ಸೇವೆ ಸಲ್ಲಿಸುತ್ತಿರುವ ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯ ಸದಸ್ಯರಾಗಿ ನೇಮಕಗೊಂಡಿರುವುದು ಇಡೀ ರಾಜ್ಯಕ್ಕೆ ಹೆಮ್ಮೆ ತಂದಿದೆ ಎಂದು
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com