ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ತಿ ಮೌಲ್ಯ 87 ಕೋಟಿ ರೂ!

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ಅವರ ಆಸ್ತಿ ಸಂಪಾದನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಠಾತ್ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ, ಶಾಸಕರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.
ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ನಿವಾಸದ ಹೊರಗಿನ ದೃಶ್ಯ
ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ನಿವಾಸದ ಹೊರಗಿನ ದೃಶ್ಯ

ಬೆಂಗಳೂರು: ಮಾಜಿ ಸಚಿವ ಹಾಗೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರ ಆಸ್ತಿ ಸಂಪಾದನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಠಾತ್ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ACB), ಶಾಸಕರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತನ್ನ ವರದಿಯಲ್ಲಿ ತಿಳಿಸಿದೆ. ಜಮೀರ್ ಖಾನ್ ಅವರ ಆಸ್ತಿ ಅಕ್ರಮ ಆಸ್ತಿಮೌಲ್ಯ 87 ಕೋಟಿಯ 44 ಲಕ್ಷದ 05 ಸಾವಿರದ 057 ಆಗಿದ್ದು ಅದು ಅವರ ಆದಾಯ ಮೂಲದ 2,031 ಪ್ರತಿಶತದಷ್ಟು ಹೆಚ್ಚಾಗಿದೆ.

ಜಾರಿ ನಿರ್ದೇಶನಾಲಯ(ED) ನೀಡಿದ ವರದಿ ಮತ್ತು ದಾಖಲೆಗಳ ಆಧಾರದ ಮೇಲೆ 85 ಸಿಬ್ಬಂದಿಯನ್ನು ಒಳಗೊಂಡ ಎಸಿಬಿಯ ಐದು ತಂಡಗಳು ಶಾಸಕರ ನಾಲ್ಕು ಆಸ್ತಿಗಳ ಮೇಲೆ ದಾಳಿ ನಡೆಸಿವೆ. ಶಾಸಕರ ವಿರುದ್ಧ ಎಸಿಬಿ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com