ಕೋವಿಡ್-19: ಬೆಂಗಳೂರಿನಲ್ಲಿ 966 ಸೇರಿ ರಾಜ್ಯದಲ್ಲಿ 1,053 ಹೊಸ ಕೇಸ್ ಪತ್ತೆ, ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 1,053 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು  ಸೋಂಕಿತರ ಸಂಖ್ಯೆ 39,76,053ಕ್ಕೆ ಏರಿಕೆಯಾಗಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 1,053 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು  ಸೋಂಕಿತರ ಸಂಖ್ಯೆ 39,76,053ಕ್ಕೆ ಏರಿಕೆಯಾಗಿದೆ.

1,080 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 6,454 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ  966 ಹೊಸ ಪ್ರಕರಣ ಪತ್ತೆಯಾಗಿದ್ದು, 989 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. 6,033 ಸಕ್ರಿಯ ಪ್ರಕರಣಗಳಿವೆ.  ಇಂದು ರಾಜ್ಯದಲ್ಲಿ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.

ಇಂದು 27,086 ಕೊರೋನಾ ಪರೀಕ್ಷೆ ನಡೆಸಲಾಗಿದೆ.  ಸೋಂಕಿನ ಪ್ರಮಾಣ ಶೇ. 3.88 ರಷ್ಟಿದ್ದು,  ಮರಣ ಪ್ರಮಾಣ ಶೂನ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com