ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಳೆದ 3 ವರ್ಷಗಳಿಂದ ರಾಜ್ಯದ 541 ಖಾಸಗಿ ಪಿಯು ಕಾಲೇಜುಗಳಲ್ಲಿ ಶೂನ್ಯ ದಾಖಲಾತಿ!

ಬೆಂಗಳೂರು ಜಿಲ್ಲೆಯ 166 ಕಾಲೇಜುಗಳು ಸೇರಿದಂತೆ ರಾಜ್ಯದ 541 ಖಾಸಗಿ ಪಿಯು ಕಾಲೇಜುಗಳು ಕಳೆದ ಮೂರು ವರ್ಷಗಳಲ್ಲಿ ಶೂನ್ಯ ಪ್ರವೇಶ ದಾಖಲಾಗಿದೆ.

ಬೆಂಗಳೂರು: ಬೆಂಗಳೂರು ಜಿಲ್ಲೆಯ 166 ಕಾಲೇಜುಗಳು ಸೇರಿದಂತೆ ರಾಜ್ಯದ 541 ಖಾಸಗಿ ಪಿಯು ಕಾಲೇಜುಗಳು ಕಳೆದ ಮೂರು ವರ್ಷಗಳಲ್ಲಿ ಶೂನ್ಯ ಪ್ರವೇಶ ದಾಖಲಾಗಿದೆ.

ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಗಣಿಸಿ ಈ ವರ್ಷ ಪ್ರವೇಶಕ್ಕಾಗಿ ಪರವಾನಗಿ ನವೀಕರಿಸುವುದಾಗಿ ಪಿಯು ಶಿಕ್ಷಣ ಇಲಾಖೆ ನಿರ್ದೇಶಕ ಆರ್ ರಾಮಚಂದ್ರನ್ ಹೇಳಿದ್ದಾರೆ.

ಮೂರು ವರ್ಷಗಳ ಕಾಲ ಶೂನ್ಯ ಪ್ರವೇಶ ಹೊಂದಿರುವ ಕಾಲೇಜುಗಳನ್ನು ಮುಂದುವರಿಸಲು ಅನುಮತಿ ಇಲ್ಲದಿದ್ದರೂ, ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಗಣಿಸಿ ಪದವಿಪೂರ್ವ ಶಿಕ್ಷಣ ಇಲಾಖೆಯು ಈ ವರ್ಷಕ್ಕೆ ಮಾತ್ರ ಈ ನಿಯಮದಿಂದ ವಿನಾಯಿತಿ ನೀಡುತ್ತಿದೆ,  ಶೂನ್ಯ ಪ್ರವೇಶ ಹೊಂದಿರುವ ಕಾಲೇಜುಗಳು ಪರವಾನಗಿ ನವೀಕರಣಕ್ಕಾಗಿ ಇಲಾಖೆಯನ್ನು ಸಂಪರ್ಕಿಸಿದರೆ ನೀಡಲಾಗುವುದು ಎಂದು ಅವರು ಹೇಳಿದರು.

ಶೂನ್ಯ ದಾಖಲಾತಿಗೆ ಕಾರಣ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಪಿಯು ಬೋರ್ಡ್ ಅಧಿಕಾರಿಯೊಬ್ಬರು, ಹೆಚ್ಚಿನ ಶುಲ್ಕ ಅಥವಾ ಸಾರಿಗೆ ಸೌಲಭ್ಯದ ಕೊರತೆಯಿಂದಾಗಿ ಶೂನ್ಯ ಪ್ರವೇಶಗಳು ಆಗಿರಬಹುದು. ಅಲ್ಲದೆ, ವಿದ್ಯಾರ್ಥಿಗಳು ಹಿಂದಿನ ವರ್ಷಗಳಲ್ಲಿ ಕಡಿಮೆ ಫಲಿತಾಂಶ ಪಡೆದ ಕಾರಣ ಈ ಕಾಲೇಜುಗಳನ್ನು ಆಯ್ಕೆ ಮಾಡದಿರಲು ನಿರ್ಧರಿಸಿರಬಹುದು ಅಥವಾ ಕೆಲವು ವಿವಾದಗಳಲ್ಲಿ ಭಾಗಿಯಾಗಿರಬಹುದು ಎಂದು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com