ಕಲಬುರಗಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವು

ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯ ಕೆಸರಿನಲ್ಲಿ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಲಬುರಗಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯ ಕೆಸರಿನಲ್ಲಿ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ಮೃತರನ್ನು ಗೊಬ್ಬೂರು ಗ್ರಾಮದ ನಿವಾಸಿ ವಿಶ್ವದೀಪ್ ಬೋವಿ (16) ಮತ್ತು ಬಂದರವಾಡ ಗ್ರಾಮದ ದೀಲೀಪ್ ಬೋವಿ (17) ಎಂದು ಗುರುತಿಸಲಾಗಿದೆ. ಇಬ್ಬರೂ ಯುವಕರು ಕೊಲ್ಲೂರು ಗ್ರಾಮದ ಹೊರವಲಯದಲ್ಲಿರುವ ಕೆರೆಗೆ ಮೀನು ಹಿಡಿಯಲು ಹೋಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏಕಾಏಕಿ ಕೆಸರಿನಲ್ಲಿ ಜಾರಿ ಬಿದ್ದು ಈಜು ಗೊತ್ತಿಲ್ಲದ ಕಾರಣ ನೀರಿನಲ್ಲಿ ಮುಳುಗಿದ್ದಾರೆ. ಮೃತದೇಹಗಳನ್ನು ಕೆರೆಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪೋಷಕರಿಗೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com