ಪಲ್ಟಿಯಾಗಿ ಬಿದ್ದಿರುವ ಬೆಂಗಾವಲು ವಾಹನ
ರಾಜ್ಯ
ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ, ಇಬ್ಬರಿಗೆ ಗಾಯ
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಬೆಂಗಾವಲು ವಾಹನ ಪಲ್ಟಿಯಾದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಬ್ರಹ್ಮಾವರ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ.
ಉಡುಪಿ: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಬೆಂಗಾವಲು ವಾಹನ ಪಲ್ಟಿಯಾದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಬ್ರಹ್ಮಾವರ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ.
ಗಾಯಾಳುಗಳನ್ನು ಡಿಎಆರ್ ನ ಎಎಸ್ ಐ ಗಣೇಶ್ ಆಳ್ವ ಹಾಗೂ ಚಾಲಕ ಚರಣ್ ಎಂದು ಗುರುತಿಸಲಾಗಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋಟದ ಮನೆಯಿಂದ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಚಿವರ ಎಸ್ಕಾರ್ಟ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ. ಬೆಂಗಾವಲು ವಾಹನದ ಎದುರು ಸಂಚರಿಸುತ್ತಿದ್ದ ಲಾರಿ ಸೂಚನೆ ನೀಡದೆ ಏಕಾಏಕಿ ರಸ್ತೆ ಬದಲಿಸಿದ್ದು, ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


