ಅಪ್ರಾಪ್ತ ಬಾಲಕಿಯ ಅಪಹರಣಕಾರನ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ

ಬೆಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣಕಾರನ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ ನೀಡುವುದಾಗಿ ಶಿವಮೊಗ್ಗ ಪೊಲೀಸರು ಘೋಷಣೆ ಮಾಡಿದ್ದಾರೆ.
ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ ಪತ್ತೆಗೆ ಸುಳಿವು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ
ಲಕ್ಷ್ಮೀನಾರಾಯಣ್ ಎಂಬುವವರ ಮಗನಾದ ಶಂಕಿತ ಅಪಹರಣಕಾರ ಲಿಂಗರಾಜು ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ವಾಸವಾಗಿರುವುದಾಗಿ ಬಾಲಕಿಯ ತಂದೆ ವಿನಯ್ ಕುಮಾರ್ ಎಂಬುವವರು ದೂರು ದಾಖಲಿಸಿದ್ದಾರೆ.
ಅಪಹರಣಕ್ಕೆ ಒಳಗಾದ ಬಾಲಕಿ ವರ್ಷಿತ ಹಾಗೂ ಅಪಹರಣಕಾರ ಎಂದೇ ಶಂಕಿಸಲಾಗಿರುವ ಲಿಂಗರಾಜು ಅವರ ಇರುವಿಕೆಯ ಬಗ್ಗೆ ಯಾವುದೇ ವಿವರಗಳು ಲಭ್ಯವಿದ್ದಲ್ಲಿ ಅಥವಾ ಸುಳಿವು ಇದ್ದಲ್ಲಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅವರ ಮೊಬೈಲ್ ದೂರವಾಣಿ ಸಂಖ್ಯೆ : 94808 03349 ಮತ್ತು 94495 84739 ಅಥವಾ ಶಿವಮೊಗ್ಗ ಪೊಲೀಸ್ ನಿಯಂತ್ರಣಾ ಕೊಠಡಿ ಸಂಖ್ಯೆ: 08182-261413 ಮತ್ತು ಮೊಬೈಲ್ ಸಂಖ್ಯೆ: 94808 03300 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


