ಕರಾವಳಿ ಜಿಲ್ಲೆಗಳಲ್ಲಿ ಮಳೆಗೆ ಭಾರೀ ಅನಾಹುತ: ಪ್ರವಾಹ ತಡೆಗೆ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಭೆ

ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬುಧವಾರ ಉಡುಪಿಯಲ್ಲಿ ಸಭೆ ನಡೆಸಲಿದ್ದಾರೆ. ಸಿಎಂಗೆ ಕಂದಾಯ ಸಚಿವ ಆರ್ ಅಶೋಕ್ ಸಾಥ್ ನೀಡಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಉಡುಪಿ: ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬುಧವಾರ ಉಡುಪಿಯಲ್ಲಿ ಸಭೆ ನಡೆಸಲಿದ್ದಾರೆ. ಸಿಎಂಗೆ ಕಂದಾಯ ಸಚಿವ ಆರ್ ಅಶೋಕ್ ಸಾಥ್ ನೀಡಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿ ಪ್ರವಾಹ ಅನಾಹುತ ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸುತ್ತೇನೆ. ಪ್ರವಾಹದಿಂದ ತೊಂದರೆಯಾಗಿರುವ ಉಡುಪಿಯ ಮರವಂತೆ ಬೀಚ್ ಸೇರಿದಂತೆ ಕೆಲವು ಕಡೆಗಳಿಗೆ ಭೇಟಿ ನೀಡಲಿದ್ದೇನೆ. 10 ದಿನಗಳ ನಂತರ ಕಾರವಾರ ಮತ್ತು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದೇನೆ ಎಂದರು.

ನಿನ್ನೆ ಮೂರು ಜಿಲ್ಲೆಗೆ ಭೇಟಿ ನೀಡಿದ್ದ ಬಸವರಾಜ ಬೊಮ್ಮಾಯಿ ಕೊಡಗು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಪರಿಶೀಲನೆ ಮಾಡಿ ಜೀವಹಾನಿ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿದ್ದರು. ಕಳೆದ ರಾತ್ರಿ ಉಡುಪಿಯ ಹೋಟೆಲ್​​ನಲ್ಲಿ ಉಳಿದಿದ್ದ ಸಿಎಂ ಬೊಮ್ಮಾಯಿ,ಇಂದು ಬೆಳಗ್ಗೆ ಮಂಗಳೂರು, ಕಾರವಾರಕ್ಕೆ ಭೇಟಿಗೆ ತೆರಳಬೇಕಿತ್ತು. ಆದರೆ ಬೆಂಗಳೂರಿಗೆ ತುರ್ತಾಗಿ ಬರಬೇಕಾಗಿರುವ ಕಾರಣ ಉತ್ತರಕನ್ನಡ ಜಿಲ್ಲೆ ಪ್ರವಾಸವನ್ನು ಸಿಎಂ ರದ್ದುಗೊಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಗೊರಟೆ ಗ್ರಾಮದಲ್ಲಿ ಕಡಲ ಕೊರೆತದಿಂದ ಆದ ಹಾನಿಯನ್ನು ವೀಕ್ಷಣೆ ಮಾಡಲು ಹೋಗಬೇಕಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರದ್ದು ಪಡಿಸಿದ್ದು, ಪ್ರವಾಹ ಪೀಡಿತ ಉಡುಪಿ ಜಿಲ್ಲೆಗೆ ಮಾತ್ರ ಭೇಟಿ ನೀಡಿ ಮಳೆಯಿಂದ ಉಂಟಾದ ಹಾನಿಯನ್ನು ವೀಕ್ಷಣೆ ಮಾಡಲಿದ್ದಾರೆ. ನಂತರ ಉಡುಪಿಯಲ್ಲಿ ಕರಾವಳಿ ಭಾಗದ ಅಧಿಕಾರಿಗಳೊಂದಿಗೆ ಪ್ರವಾಹ ಹಾನಿ ಕುರಿತು ಸಭೆಯನ್ನು ನಡೆಸಲಿದ್ದಾರೆ. ಮುಂದಿನ 10 ದಿನಗಳೊಳಗಾಗಿ ಕಾರವಾರಕ್ಕೆ ಭೇಟಿ ನೀಡಲಿದ್ದಾರೆ.

ಇಂದು ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಪರಿವೀಕ್ಷಣೆ ಮಾಡಲಿದ್ದು ಮುಂದಿನ ದಿನಗಳಲ್ಲಿ ಕಾರವಾರ, ಉತ್ತರ ಕನ್ನಡಕ್ಕೆ ಭೇಟಿ ನೀಡಲು ಮುಂದಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com