ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಟೋ-ಕಾರು ಡಿಕ್ಕಿ: ಮೂವರು ಸ್ಥಳದಲ್ಲಿಯೇ ಸಾವು

ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಡ್ಯ: ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. 

ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಪರಿಣಾಮ ಆಟೋದಲ್ಲಿದ್ದ ಮೂವರು ಸ್ಥಳದಲ್ಲಿಯೇ  ಮೃತಪಟ್ಟಿದ್ದಾರೆ. ಮೃತರನ್ನು ಆಟೋ ಚಾಲಕ ಶ್ರೀನಿವಾಸ್, ರವಿ ಕುಮಾರ್, ಭಾಸ್ಕರ್ ಎಂದು ಗುರುತಿಸಲಾಗಿದೆ.

ಕಾರು ಗುದ್ದಿದ ರಭಸಕ್ಕೆ ರಸ್ತೆ ಪಕ್ಕದ ಗುಂಡಿಗೆ ಆಟೋ ಬಿದಿದ್ದು, ಆಟೋ ಮೇಲೆ ಕಾರು ಬಿದ್ದಿದೆ. ಸ್ಥಳಕ್ಕೆ ಮಳವಳ್ಳಿ ಠಾಣಾ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com