ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವ ಪತ್ತೆ!

ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವವೊಂದು ಉಡುಪಿ ಜಿಲ್ಲೆಯ ಬೈಂದೂರಿನ ಹೆನುಬೇರು ಬಳಿ ನಿನ್ನೆ ಬುಧವಾರ ಪತ್ತೆಯಾಗಿದೆ.
ಬೈಂದೂರಿನ ಹೆನುಬೇರುವಿನಲ್ಲಿ ಸುಟ್ಟು ಕರಕಲಾದ ಕಾರು ಪತ್ತೆ
ಬೈಂದೂರಿನ ಹೆನುಬೇರುವಿನಲ್ಲಿ ಸುಟ್ಟು ಕರಕಲಾದ ಕಾರು ಪತ್ತೆ
Updated on

ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವವೊಂದು ಉಡುಪಿ ಜಿಲ್ಲೆಯ ಬೈಂದೂರಿನ ಹೆನುಬೇರು ಬಳಿ ನಿನ್ನೆ ಬುಧವಾರ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ಗುರುತು ಸಿಗದಷ್ಟು ಸುಟ್ಟು ಕರಕಲಾದ ಮೃತದೇಹ ಸಿಕ್ಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತದೇಹ ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಇನ್ನೂ ಗುರುತಿಸಲಾಗಿಲ್ಲ. ಚಾಲಕನ ಸೀಟಿನ ಹಿಂದೆ ಶವ ಪತ್ತೆಯಾಗಿದೆ.

ಮೇಲ್ನೋಟಕ್ಕೆ ಇದೊಂದು ಕೊಲೆ ಪ್ರಕರಣ ಎಂದು ಕಂಡುಬರುತ್ತಿದೆ. ಎಫ್‌ಎಸ್‌ಎಲ್‌ ತಜ್ಞರು ಸ್ಥಳಕ್ಕೆ ಆಗಮಿಸಿ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಈ ನಡುವೆ ಬೈಂದೂರು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಮಾರ್ಗದಲ್ಲಿ ಯಾರು ಪ್ರಯಾಣಿಸಿದ್ದಾರೆ ಎಂದು ಮಾಹಿತಿ ಕಲೆಹಾಕುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com