ಬಿಜೆಪಿಯಲ್ಲಿ ವ್ಯಕ್ತಿಪೂಜೆಯಿಲ್ಲ, ಅದು ಇರುವುದು ಕಾಂಗ್ರೆಸ್ ನಲ್ಲಿ, ಮಂಕಿಪಾಕ್ಸ್ ಬಗ್ಗೆ ನಿಗಾವಹಿಸಲಾಗುತ್ತಿದೆ: ಸಚಿವ ಸುಧಾಕರ್

ಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ರಾಜ್ಯದ ಜನತೆಗೆ ಸ್ವಚ್ಛ, ತೃಪ್ತಿದಾಯಕ ಆಡಳಿತವನ್ನು ನೀಡುತ್ತಾ ಬಂದಿದೆ. ರಾಜ್ಯದ ಅಭಿವೃದ್ಧಿಯ ಮುನ್ನೋಟ ಒಳಗೊಂಡಂತಹ, ಎಲ್ಲಾ ಇಲಾಖೆಗಳಲ್ಲಿ ಪ್ರಗತಿಯಾಗಿದ್ದು ಅದನ್ನು ಸಾದರಪಡಿಸಲು, ಶುದ್ಧ ಆಡಳಿತವನ್ನು, ಪ್ರಧಾನಿ ಮೋದಿಯವರ ಕನಿಷ್ಟ ಸರ್ಕಾರ, ಗರಿಷ್ಟ ಆಡಳಿತ ನೀತಿಯ ಹಾದಿಯಲ್ಲಿ ಮುಖ್ಯಮಂತ್ರಿ ಬ
ಡಾ ಕೆ ಸುಧಾಕರ್
ಡಾ ಕೆ ಸುಧಾಕರ್
Updated on

ಬೆಂಗಳೂರು: ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ರಾಜ್ಯದ ಜನತೆಗೆ ಸ್ವಚ್ಛ, ತೃಪ್ತಿದಾಯಕ ಆಡಳಿತವನ್ನು ನೀಡುತ್ತಾ ಬಂದಿದೆ. ರಾಜ್ಯದ ಅಭಿವೃದ್ಧಿಯ ಮುನ್ನೋಟ ಒಳಗೊಂಡಂತಹ, ಎಲ್ಲಾ ಇಲಾಖೆಗಳಲ್ಲಿ ಪ್ರಗತಿಯಾಗಿದ್ದು ಅದನ್ನು ಸಾದರಪಡಿಸಲು, ಶುದ್ಧ ಆಡಳಿತವನ್ನು, ಪ್ರಧಾನಿ ಮೋದಿಯವರ ಕನಿಷ್ಟ ಸರ್ಕಾರ, ಗರಿಷ್ಟ ಆಡಳಿತ ನೀತಿಯ ಹಾದಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರು ಸಾಗುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಶ್ಲಾಘಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈ 28ಕ್ಕೆ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸಾಧನಾ ಸಮಾವೇಶ ಹಮ್ಮಿಕೊಂಡಿದೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು ಮೂರು ವರ್ಷವಾಗುತ್ತಿದೆ. ಇವೆರಡನ್ನೂ ಇಟ್ಟುಕೊಂಡು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸರ್ಕಾರದ ಕಾರ್ಯಕ್ರಮದ ಫಲಾನುಭವಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುತ್ತಾರೆ ಎಂದರು.

ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರುಗಳ ನೇತೃತ್ವದಲ್ಲಿ ದೊಡ್ಡಬಳ್ಳಾಪುರದಲ್ಲಿ ಜುಲೈ 28ರಂದು ಬಿಜೆಪಿ ಸಾಧನಾ ಸಮಾವೇಶ ನಡೆಯಲಿದೆ. ಬಿಜೆಪಿಯಲ್ಲಿ ವ್ಯಕ್ತಿಪೂಜೆಯಿಲ್ಲ, ವ್ಯಕ್ತಿಪಲ್ಲಕ್ಕಿ, ವ್ಯಕ್ತಿ ಪ್ರತಿಷ್ಠೆಯಿಲ್ಲ, ಇಲ್ಲಿ ರಾಜ್ಯದ ದೇಶದ ಜನರ ಏಳಿಗೆಗಾಗಿ ಮಾಡುವ ಕಾರ್ಯಕ್ರಮವಿರುತ್ತದೆ. ದೇಶ ಮೊದಲು ಎರಡನೆಯದ್ದು ಪಕ್ಷ ಮೂರನೆಯದ್ದು ನಾನು ಎಂಬುದೇ ಬಿಜೆಪಿಯ ತತ್ವವಾಗಿದೆ. ಆದರೆ ಕಾಂಗ್ರೆಸ್ ನಲ್ಲಿ ಸಂಪೂರ್ಣ ವಿರುದ್ಧ ನಾನು, ನನ್ನ ಕುಟುಂಬ ಎಂಬುದಾಗಿರುತ್ತದೆ ಎಂದರು.

ಬಿಜೆಪಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75ನೇ ವರ್ಷಾಚರಣೆಯನ್ನು ಮಾಡುತ್ತಿದೆ. ವೈಯಕ್ತಿಕವಾಗಿ ನಾನು ಯಾರೂ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದನ್ನು ವಿರೋಧಿಸುವುದಿಲ್ಲ, ಆದರೆ ಒಬ್ಬ ರಾಜಕಾರಣಿ ಯಾವ ರೀತಿ ಸಮಾಜದಲ್ಲಿ ನಡೆದುಕೊಳ್ಳಬೇಕು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಒಂದೆಡೆ ರಾಜ್ಯದ 13 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಸಂದರ್ಭದಲ್ಲಿ ಕಾರ್ಯಕ್ರಮ ಮಾಡಿದರೆ ಜನರು ಯಾವ ರೀತಿ ನೋಡುತ್ತಾರೆ ಎಂಬುದನ್ನು ನೋಡಬೇಕು ಎಂದರು.

ಮಂಕಿಪಾಕ್ಸ್ ವೈರಸ್: ಕೇರಳದಲ್ಲಿ ಒಂದು ಮಂಕಿಪಾಕ್ಸ್ ಪತ್ತೆಯಾಗಿದ್ದು ವಿಮಾನ ನಿಲ್ದಾಣದಲ್ಲಿ ತಕ್ಷಣ ಸೋಂಕಿತರನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಮೂರು ತಿಂಗಳ ಹಿಂದೆಯೇ ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ರಾಜ್ಯದ ವಿಮಾನ ನಿಲ್ದಾಣಗಳು, ಬಂದರು ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತಿದೆ. ಮಂಕಿಪಾಕ್ಸ್ ಇರುವ ವ್ಯಕ್ತಿ ಕರ್ನಾಟಕಕ್ಕೆ ಬಂದರೆ ಅವರನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡುವ ಕೆಲಸ ಕಟ್ಟುನಿಟ್ಟಾಗಿ ಆಗುತ್ತದೆ. ಯಾರೂ ಆತಂಕಗೊಳ್ಳಬೇಕಾಗಿಲ್ಲ ಎಂದರು.

ಮಂಕಿಪಾಕ್ಸ್ ಸೋಂಕಿನ ಲಕ್ಷಣಗಳು, ಮಾರ್ಗಸೂಚಿಗಳನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದು ಸಾರ್ವಜನಿಕರು ಅದನ್ನು ಗಮನಿಸಬೇಕು ಎಂದರು.

ಮೊಟ್ಟೆ, ಹಾಲು ಪೌಷ್ಟಿಕ ಆಹಾರ: ಮೊಟ್ಟೆ, ಹಾಲು ಇವೆಲ್ಲ ಅತ್ಯಂತ ಪೌಷ್ಟಿಕ ಆಹಾರವಾಗಿದೆ. ಈ ಬಗ್ಗೆ ಎನ್ ಇಪಿ ಕಾರ್ಯಪಡೆ ವರದಿ ನೀಡಿದ್ದರೆ ವರದಿಯನ್ನು ಓದಿ ವ್ಯಾಖ್ಯಾನ ಮಾಡುತ್ತೇನೆ ಎಂದು ಡಾ ಸುಧಾಕರ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com