2025 ರೊಳಗೆ ಮಲೇರಿಯಾ ಮುಕ್ತ ರಾಜ್ಯವನ್ನಾಗಿಸಲು ಸಂಪೂರ್ಣ ಬೆಂಬಲ- ಡಾ. ಕೆ. ಸುಧಾಕರ್

ದೇಶ ಮತ್ತು ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸಲು ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಡಾ.ಕೆ. ಸುಧಾಕರ್
ಡಾ.ಕೆ. ಸುಧಾಕರ್

ಬೆಂಗಳೂರು: ದೇಶ ಮತ್ತು ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸಲು ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಆರೋಗ್ಯ ಇಲಾಖೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ನಿರಂತರ ನಿಗಾ, ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮಗಳೊಂದಿಗೆ ಮಲೇರಿಯಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. 2025 ರೊಳಗೆ ಗುರಿ ಸಾಧಿಸಲು ಸರ್ಕಾರದ ಕಾರ್ಯಕ್ರಮಗಳಿಗೆ ಎನ್ ಜಿ ಒ ಹಾಗೂ ಸಾರ್ವಜನಿಕರಿಂದ ಬೆಂಬಲದ ಅಗತ್ಯವಿದೆ ಎಂದರು.

ಮಲೇರಿಯಾ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವ  ದಕ್ಷಿಣ ಕನ್ನಡ ಮತ್ತು ಉಡುಪಿಯಂತಹ  ಕಡೆಗಳಲ್ಲಿ ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ. ಪ್ರಕರಣ ಇಲ್ಲದ ಕಡೆಯೂ ಸೂಕ್ತ ನಿಗಾ ವಹಿಸಬೇಕಾಗಿದೆ. 2020ರಲ್ಲಿ ದೇಶಾದ್ಯಂತ 1,86,532 ಮಲೇರಿಯಾ ಪ್ರಕರಣ ಪತ್ತೆಯಾಗಿತ್ತು. ಈ ಪೈಕಿ ಕರ್ನಾಟಕದಲ್ಲಿ ಕೇವಲ 1,701 ಪ್ರಕರಣಗಳು ಅಥವಾ ಶೇ. 0.9 ರಷ್ಟು ಕಂಡುಬಂದಿದ್ದಾಗಿ ತಿಳಿಸಿದರು.

ಕಳೆದ ಆರು ತಿಂಗಳಲ್ಲಿ ಕೇವಲ 100 ಮಲೇರಿಯಾ ಪ್ರಕರಣಗಳು ದಾಖಲಾಗಿದೆ. ಆದರೆ, ಮುಂಗಾರಿನೊಂದಿಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಅರಣ್ಯಕ್ಕೆ ಹತ್ತಿರದಲ್ಲಿರುವ ಪ್ರದೇಶಗಳಲ್ಲಿ ಮಲೇರಿಯಾ ಪ್ರಕರಣಗಳು ಏರಿಕೆಯಾಗುತ್ತಿದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com