ರಾಜ್ಯ ಸರ್ಕಾರಿ ನೌಕರರೇ ಎಚ್ಚರ! ಕನ್ನಡದಲ್ಲಿ ಮುದ್ರಣ ದೋಷವಾದರೆ ಸಂಬಳ ಕಡಿತ ಸಾಧ್ಯತೆ

ರಾಜ್ಯ ಸರ್ಕಾರಿ ನೌಕರರೇ ಎಚ್ಚರ! ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್  ಅಥವಾ ವ್ಯಾಕರಣದಲ್ಲಿ ದೋಷವಾದರೆ, ನಿಮ್ಮ ಸಂಬಳದಲ್ಲಿ ಕಡಿತವಾಗಲಿದೆ, ಮುಂಬಡ್ತಿ ಕೂಡಾ ನಿರಾಕರಿಸಲಾಗುತ್ತದೆ. ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರೇ ಎಚ್ಚರ! ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್  ಅಥವಾ ವ್ಯಾಕರಣದಲ್ಲಿ ದೋಷವಾದರೆ,  ಸಂಬಳದಲ್ಲಿ ಕಡಿತವಾಗಲಿದೆ, ಮುಂಬಡ್ತಿ ಕೂಡಾ ನಿರಾಕರಿಸಲಾಗುತ್ತದೆ. ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಶುಕ್ರವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ  ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ- ವಿಡಿಯೋ ಮಾಡದಂತೆ ಆದೇಶ ಹೊರಡಿಸಿತ್ತು. ಆದರೆ, ಅದಕ್ಕೆ ತೀವ್ರ ಟೀಕೆಗಳು ವ್ಯಕ್ತವಾದ ನಂತರ ಅದನ್ನು ಹಿಂಪಡೆದು ಸರ್ಕಾರ ಹೊರಡಿಸಿದ ಹೊಸ ಆದೇಶದಲ್ಲಿ ಕರ್ನಾಟಕ ಸೇರಿದಂತೆ ಹಲವು ಪದಗಳಲ್ಲಿ ವ್ಯಾಕರಣ ದೋಷಗಳು ಕಂಡುಬಂದಿದ್ದವು. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಅಧಿಸೂಚನೆ ಹೊರಡಿಸುವ, ಟೈಪಿಂಗ್ ಮಾಡುವ ಅಧಿಕಾರಿಗಳು ಭಾಷೆಯನ್ನು ಗಂಭೀರವಾಗಿ ತೆಗೆದುಕೊಳ್ಳದ ಕಾರಣ  ಈ ಪ್ರಮಾದ ಆಗಿದೆ ಎಂದರು. 

ಕೆಲವು ವೇಳೆ ಇಂಗ್ಲೀಷ್ ನಲ್ಲಿ ಆದೇಶ ಅಥವಾ ಸುತ್ತೋಲೆ  ರಚಿಸುವಾಗ ಅಥವಾ  ಗೂಗಲ್ ಟ್ರಾನ್ಸ್ಲೇಟ್ ನೆರವು ಪಡೆಯುತ್ತಿರುವುದರಿಂದಲೂ ಈ ರೀತಿಯ ತಪ್ಪುಗಳು ಆಗುತ್ತಿವೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದೊಂದಿಗೆ ಕೆಲಸ ಮಾಡುವವರು ರಾಜ್ಯದ ಭಾಷೆಯನ್ನು ಬಲ್ಲವರಾಗಿರಬೇಕು ಎಂದರು. 

ಟೈಪಿಂಗ್ ಮಾಡಿದವರು ಸೇರಿದಂತೆ ಆದೇಶದ ಪತ್ರಕ್ಕೆ ಸಹಿ ಮಾಡಿ ಹೊರಡಿಸಿದ ಅಧಿಕಾರಿಗಳ ಹೆಸರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅಧಿಕಾರಿಗಳಿಗೆ ನಾಗಾಭರಣ ಕಳುಹಿಸುತ್ತಿದ್ದಾರೆ. ಸರ್ಕಾರಿ ಆದೇಶ, ಅಧಿಸೂಚನೆ ಮತ್ತಿತರ ದಾಖಲಾತಿಗಳಲ್ಲಿ ತಪ್ಪು ಮಾಡಿದವರ ಹೆಸರನ್ನು ಸರ್ವೀಸ್  ರೆಕಾರ್ಡ್ ನಲ್ಲಿ ಸೇರಿಸಬೇಕು, ಈ ರೀತಿ ಆದಾಗ ಅವರ ಸಂಬಳ ಏರಿಕೆಯಾಗಿಲ್ಲ, ಮುಂಬಡ್ತಿ ಸಿಗಲ್ಲ ಎಂದು ಅವರು ತಿಳಿಸಿದರು. 

ಬಹುತೇಕ ಅಧಿಸೂಚನೆ ಅಥವಾ ಸುತ್ತೋಲೆಗಳನ್ನು  ಪ್ರಥಮ ಅಥವಾ ದ್ವಿತೀಯ ದರ್ಜೆ ಸಹಾಯಕರಿಂದ ಟೈಪ್ ಮಾಡಿಸಲಾಗುತ್ತದೆ. ಅವರಿಗೆ ಕನ್ನಡ ಭಾಷೆ ಗೊತ್ತಿರುತ್ತದೆ. ಆದರೆ, ಕೆಲವು ವೇಳೆ, ಅವರು ತಡ ರಾತ್ರಿ ಟೈಪ್ ಮಾಡುವುದು ಮತ್ತಿತರ ಒತ್ತಡಕ್ಕೆ ಸಿಲುಕಿರುತ್ತಾರೆ. ಆದ್ದರಿಂದ ಓದಲು, ತಪ್ಪಿರುವುದನ್ನು ಸರಿಪಡಿಸಲು ಸಾಕಷ್ಟು ಸಮಯವಿರುವುದಿಲ್ಲ ಎಂದು ಡಿಪಿಎಆರ್ ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com