ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು

ರಸ್ತೆ ಅಪಘಾತದಲ್ಲಿ ಆಂಧ್ರ ಪ್ರದೇಶ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೈಂದೂರಿನಲ್ಲಿ ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉಡುಪಿ: ರಸ್ತೆ ಅಪಘಾತದಲ್ಲಿ ಆಂಧ್ರ ಪ್ರದೇಶ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೈಂದೂರಿನಲ್ಲಿ ವರದಿಯಾಗಿದೆ.

ಮೃತ ಯುವಕರನ್ನು ತರುಣ್ ಕುಮಾರ್ ರೆಡ್ಡಿ(19) ಹಾಗೂ ಆಶೀಶ್ ರೆಡ್ಡಿ(18) ಎಂದು ಗುರುತಿಸಲಾಗಿದ್ದು ಇಬ್ಬರೂ ವಿದ್ಯಾರ್ಥಿಗಳು ಮಣಿಪಾಲದಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಇಬ್ಬರೂ ಯುವಕರು ಮಣಿಪಾಲದಿಂದ ಮುರುಡೇಶ್ವರಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಬೈಂದೂರಿನ ಕಂಬದಕೊನೆಯ ಬಳಿ ಇರುವ ರಾಷ್ಟ್ರೀಯ ಹದ್ದಾರಿ 66 ರಲ್ಲಿ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದು ರಸ್ತೆ ವಿಭಜಕಕ್ಕೆ ಗುದ್ದಿದ್ದಾರೆ ಪರಿಣಾಮ ಇಬ್ಬರೂ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.

ಸ್ಥಳೀಯ ಜನತೆ ತಕ್ಷಣವೇ ಅಲ್ಲಿಗೆ ಬಂದು ಯುವಕರನ್ನು ಆಸ್ಪತ್ರೆಗೆ ದಾಖಳಿಸಿದರು ಆದರೆ ಆ ವೇಳೆಗೆ ಯುವಕರು ಸಾವನ್ನಪ್ಪಿದ್ದರು ಎಂದು ವೈದ್ಯರು ಘೋಷಿಸಿದ್ದಾರೆ. ಬೈಂದೂರು ಪೊಲೀಸರು ರಸ್ತೆ ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com