ರಾಯಚೂರು: ಕಾರು-ಲಾರಿ ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ನಾಲ್ವರು ಸಾವು
ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಜವಳಗೇರಾ ಗ್ರಾಮದ ಸಮೀಪದ ಬಾಲಯ್ಯ ಕ್ಯಾಂಪ್ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಭೀಕರ ಅಪಘಾತದಲ್ಲಿ ಸಾವಿಗೀಡಾದವರು ಆಂಧ್ರಪ್ರದೇಶ ಮೂಲದ ದೀಪ್(35), ಪೂರ್ಣಿಮಾ(30), ಜಶಿನ್(12) ಹಾಗೂ ಮಾಹಿನ್(7) ಎಂದು ಗುರುತಿಸಲಾಗಿದೆ. ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಇದನ್ನು ಓದಿ: ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು
ಬೆಂಗಳೂರಿನಿಂದ ಸಿಂಧನೂರು ಮಾರ್ಗವಾಗಿ ಹೈದ್ರಾಬಾದ್ ಗೆ ತೆರಳುತ್ತಿದ್ದ ಕುಟುಂಬ ದುರಂತ ಸಾವಿಗೀಡಾಗಿದೆ. ಲಾರಿ ಚಾಲಕ ಘಟನೆ ಬಳಿಕ ಪರಾರಿಯಾಗಿದ್ದಾನೆ. ಮೃತ ದೇಹಗಳನ್ನ ಸಿಂಧನೂರು ತಾಲೂಕಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ಎರಡು ಜೆಸಿಬಿಯಿಂದ ಅಪಘಾತವಾದ ವಾಹನಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ