ಇದೇ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಬಿನಿ ಜಲಾಶಯ
ಕಬಿನಿ ಜಲಾಶಯ
Updated on: 

ಮೈಸೂರು: ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕಬಿನಿ ಜಲಾಶಯದ  ಉದ್ಯಾನವನವನ್ನು ಸರ್ಕಾರ ಮಾಡಬೇಕೋ ಅಥವಾ ಪಿಪಿಪಿ ಮಾದರಿಯಲ್ಲಿ ಮಾಡಬೇಕೋ ಎಂಬ ಗೊಂದಲದಲ್ಲಿದೆ.  ಗೊಂದಲ ವನ್ನು ಆದಷ್ಟು ಬೇಗನೇ ನಿವಾರಿಸಿ ಕಾಮವಾರಿಯನ್ನು ಕೈಗೊಳ್ಳಲಾಗುವುದು ಎಂದರು. 

ಹೆಚ್.ಡಿ.ಕೋಟೆಗೆ ವಿಶೇಷ ಕಾರ್ಯಕ್ರಮ

ಹೆಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದರ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ಶಿಕ್ಷಣ ವಲಯದಲ್ಲಿ ಅತಿ ಹೆಚ್ಚಿನ ಶಾಲಾ ಕಟ್ಟಡಗಳ ನಿರ್ಮಾಣ, ಪಿ ಹೆಚ್ ಸಿ ಕೇಂದ್ರಗಳನ್ನು ಸಿ.ಹೆಚ್.ಸಿ ಕೇಂದ್ರಗಳಾಗಿ  ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಶಾಸಕರಿಗೆ ರಸ್ತೆ, ಮನೆಗಳ ನಿರ್ಮಾಣ ಕ್ಕೆ ಅನುದಾನ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಕೂಡಲೇ ಅವುಗಳ ಬಗ್ಗೆ ಗಮನ ಹರಿಸಿ ಬಿದ್ದುಹೋಗಿರುವ ಮನೆಗಳಿಗೆ ಗೊಂದಲ ನಿವಾರಿಸಿ,  ಅನುದಾನ ಬಿಡುಗಡೆ ಮಾಡುವಂತೆ ಸೂಚನೆ ನೀಡಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com