ಸಾಂದರ್ಭಿಕ ಚಿತ್ರ
ರಾಜ್ಯ
ಬೆಂಗಳೂರು: ಹೊಸಕೋಟೆ ಬಳಿ ಗೋಡೆ ಕುಸಿದು ನಾಲ್ವರು ವಲಸೆ ಕಾರ್ಮಿಕರು ದುರ್ಮರಣ
ಭಾರೀ ಮಳೆಗೆ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ನ ಗೋಡೆ ಕುಸಿದು ನಾಲ್ವರು ವಲಸೆ ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ಹೊಸಕೋಟೆಯ ತಿರುಮಲ ಶೆಟ್ಟಿಯಲ್ಲಿ ನಡೆದಿದೆ.
ಬೆಂಗಳೂರು: ಭಾರೀ ಮಳೆಗೆ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ನ ಗೋಡೆ ಕುಸಿದು ನಾಲ್ವರು ವಲಸೆ ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ಹೊಸಕೋಟೆಯ ತಿರುಮಲ ಶೆಟ್ಟಿಯಲ್ಲಿ ನಡೆದಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತ ಹಾಗೂ ಗಾಯಗೊಂಡ ಕಾರ್ಮಿಕರು ಉತ್ತರ ಭಾರತದ ಮೂಲದವರು ಎನ್ನಲಾಗಿದೆ. ತಡೆಗೋಡೆ ಪಕ್ಕದಲ್ಲಿ ಹಾಕಲಾಗಿದ್ದ ಶೆಡ್ ನಲ್ಲಿ ಮಲಗಿದ್ದ ವೇಳೆ ಅವರ ಮೇಲೆ ಗೋಡೆ ಕುಸಿದ ಈ ದುರ್ಘಟನೆ ಸಂಭವಿಸಿದೆ.
ಗೋಡೆಯಡಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಅಪಾರ್ಟ್ ಮೆಂಟ್ ಮಾಲೀಕ ಹಾಗೂ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ