ಜುಲೈ 30ರಂದು ಸಿಇಟಿ ಫಲಿತಾಂಶ: ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಿದ್ದ 2022-23ನೇ ಸಾಲಿನ ರಾಜ್ಯ ಸಿಇಟಿ ಫಲಿತಾಂಶ ಜುಲೈ 30ಕ್ಕೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಮಾಹಿತಿ ನೀಡಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು:   ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಿದ್ದ 2022-23ನೇ ಸಾಲಿನ ರಾಜ್ಯ ಸಿಇಟಿ ಫಲಿತಾಂಶ ಜುಲೈ 30ಕ್ಕೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಮಾಹಿತಿ ನೀಡಿದ್ದಾರೆ. 

ಕಳೆದ ಜೂನ್‌ 16 ರಿಂದ 18ರವರೆಗೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆ-ಸಿಇಟಿ) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜು.17 ಕ್ಕೆ ಪ್ರಕಟಿಸುವುದಾಗಿ ಹೇಳಿತ್ತು. ಅದರಂತೆ ಫಲಿತಾಂಶ ಪ್ರಕಟಿಸಲು ಕೆಇಎ ಸಿದ್ಧವಿದ್ದರೂ ಸಿಬಿಎಸ್‌ಇ ಮತ್ತು ಐಸಿಎಸ್‌ಇ 12ನೇ ತರಗತಿ ಫಲಿತಾಂಶಗಳು ಪ್ರಕಟವಾಗುವುದು ತಡವಾದ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com