ಕೋವಿಡ್-19: ರಾಜ್ಯದಲ್ಲಿಂದು 1,886 ಹೊಸ ಪ್ರಕರಣ ಪತ್ತೆ, 1,242 ಗುಣಮುಖ, ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 1,886 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,005,671ಕ್ಕೆ ಏರಿಕೆಯಾಗಿದೆ.  
ಸಾಂದರ್ಭಿಕ  ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 1,886 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,005,671ಕ್ಕೆ ಏರಿಕೆಯಾಗಿದೆ.  1,242 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ವಾಪಸ್ಸಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಬಳ್ಳಾರಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಒಟ್ಟಾರೇ ಸಾವಿನ ಸಂಖ್ಯೆ 40,102ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 10,509 ಸಕ್ರಿಯ ಪ್ರಕರಣಗಳಿವೆ.  ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 5.82 ರಷ್ಟಿದ್ದು, ವಾರದ ಪಾಸಿಟಿವಿಟಿ ಪ್ರಮಾಣ ಶೇ. 5.97 ರಷ್ಟಿದೆ.

ಬೆಂಗಳೂರಿನಲ್ಲಿ 1,342 ಹೊಸ ಪ್ರಕರಣ ಪತ್ತೆಯಾಗಿದ್ದು, 1,063 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 32,379 ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com