ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಕೊರೋನಾ ಕೊಂಚ ಇಳಿಕೆ: ಇಂದು ಬೆಂಗಳೂರಿನಲ್ಲಿ 429 ಸೇರಿ 463 ಮಂದಿಗೆ ಪಾಸಿಟಿವ್; ಸಾವು ಶೂನ್ಯ!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 463 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,956,334ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 463 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,956,334ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,066 ಇದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು 429 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,791,740ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ.

ರಾಜ್ಯದಲ್ಲಿ ಇಂದು199 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,912,575ಕ್ಕೆ ಏರಿಕೆಯಾಗಿದೆ. ಇನ್ನು 3,651 ಸಕ್ರಿಯ ಪ್ರಕರಣಗಳಿವೆ.

Related Stories

No stories found.

Advertisement

X
Kannada Prabha
www.kannadaprabha.com