ಇಡಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ
ಇಡಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ರಾಹುಲ್ ಗಾಂಧಿ ಇಡಿ ವಿಚಾರಣೆ: ಬೆಂಗಳೂರಿನಲ್ಲೂ ಕಾಂಗ್ರೆಸ್ ಪ್ರತಿಭಟನೆ; ಇಡಿ ಕಚೇರಿ ಮುಂದೆ ಕಾರ್ಯಕರ್ತರ ಧರಣಿ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ಬೆಂಗಳೂರಿಗೂ ವ್ಯಾಪಿಸಿದೆ.

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ಬೆಂಗಳೂರಿಗೂ ವ್ಯಾಪಿಸಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ಶಾಂತಿನಗರದಲ್ಲಿರುವ ಇಡಿ (ಜಾರಿ ನಿರ್ದೇಶನಾಲಯ) ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ.

ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯಲ್ಲಿ ಇಡಿ ವಿಚಾರಣೆಗೆ ಹಾಜರಾದ ರಾಹುಲ್‌ಗಾಂಧಿ ಎಐಸಿಸಿ ಕಚೇರಿಯಿಂದ ಸುಮಾರು 7 ಕಿ.ಮೀ. ಪಾದಯಾತ್ರೆ ನಡೆಸಿ ಇಡಿ ಕಚೇರಿ ತಲುಪಿದರು. ದೆಹಲಿಯಲ್ಲಿ ಇದು ಬೃಹತ್ ಪ್ರತಿಭಟನೆಯ ರೂಪ ಪಡೆದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕವೂ ಸಹಿತ ಹಲವು ರಾಜ್ಯಗಳಲ್ಲಿ ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಇಡಿ ಕಚೇರಿ ಮುಂದೆ ನಡೆಸಿದ ಹೋರಾಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸಹಿತ ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇದರ ಹಿಂದೆ ದ್ವೇಷದ ರಾಜಕಾರಣ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಖಂಡಿಸಲಾಯಿತು.

ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಹೆಚ್ಚಿನ ಕಾರ್ಯಕರ್ತರು ಜಮಾಯಿಸಿದ್ದರು. ಶಾಂತಿನಗರ, ಲಾಲ್‌ಬಾಗ್, ವಿಲ್ಸನ್ ಗಾರ್ಡನ್ ಸುತ್ತಮುತ್ತಲಿನ ಏರಿಯಾಗಳಲ್ಲಿ ಸೋಮವಾರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೆಲವು ಕಾರ್ಯಕರ್ತರು ಇಡಿ ಕಚೇರಿಯೊಳಗೆ ನುಗ್ಗಲು ಪ್ರಯತ್ನ ಮಾಡಿದರು. ಕೂಡಲೇ ಪೊಲೀಸರು ಅವರನ್ನು ವಶಕ್ಕೆ ಪಡೆದರು.  
 

Related Stories

No stories found.

Advertisement

X
Kannada Prabha
www.kannadaprabha.com