ಬೆಂಗಳೂರಿಗೆ ರಾಷ್ಟ್ರಪತಿ ಕೋವಿಂದ್ ಆಗಮನ: ರಾಜ್ಯಪಾಲ, ಸಿಎಂ ಬೊಮ್ಮಾಯಿ ಸ್ವಾಗತ

ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಸೋಮವಾರ ನಗರಕ್ಕೆ ಆಗಮಿಸಿದ್ದಾರೆ.
ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರನ್ನು ಸ್ವಾಗತಿಸುತ್ತಿರುವ ಸಿಎಂ ಬೊಮ್ಮಾಯಿ.
ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರನ್ನು ಸ್ವಾಗತಿಸುತ್ತಿರುವ ಸಿಎಂ ಬೊಮ್ಮಾಯಿ.

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಸೋಮವಾರ ನಗರಕ್ಕೆ ಆಗಮಿಸಿದ್ದಾರೆ.

ವಾಯುಪಡೆಯ ವಿಶೇಷ ವಿಮಾನದಲ್ಲಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿಯವರನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಇಂದು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ.

ನಾಳೆ ಕನಕಪುರ ರಸ್ತೆಯ ವಸಂತಪುರ ಸಮೀಪದ ವೈಕುಂಠ ಬೆಟ್ಟದಲ್ಲಿ ಇಸ್ಕಾನ್ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ಉದ್ಘಾಟಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com