ಜೂನ್ 20, 21 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ, ಯೋಗ ದಿನಾಚರಣೆಯಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21 ರಂದು ಎರಡು ದಿನಗಳ ಕಾಲ ರಾಜ್ಯಪ್ರವಾಸ ಕೈಗೊಳ್ಳುತ್ತಿದ್ದು, ರಾಜ್ಯಸರ್ಕಾರ ಪ್ರಧಾನಿ ಆಹ್ವಾನಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21 ರಂದು ಎರಡು ದಿನಗಳ ಕಾಲ ರಾಜ್ಯಪ್ರವಾಸ ಕೈಗೊಳ್ಳುತ್ತಿದ್ದು, ರಾಜ್ಯಸರ್ಕಾರ ಪ್ರಧಾನಿ ಆಹ್ವಾನಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎರಡು ದಿನ ರಾಜ್ಯದಲ್ಲಿರುವ ಪ್ರಧಾನಿ ಮೋದಿ ಅವರು ಜೂನ್ ೨೧ರಂದು ಮೈಸೂರಿನಲ್ಲಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಪ್ರವಾಸದ ವಿವರ
–ಜೂನ್ 20 ರಂದು ಬೆಳಗ್ಗೆ 11.55ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮನ

-ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್ ಮೂಲಕ ಕೊಮ್ಮಘಟ್ಟ ಹೆಲಿಪ್ಯಾಡ್ ಗೆ ಆಗಮನ

-ಮಧ್ಯಾಹ್ನ 12.30ರಿಂದ 1.45 ರವರೆಗೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕು ಸ್ಥಾಪನೆ, ರೈಲ್ವೇ ರೋಡ್ ಯೋಜನೆ ಮತ್ತು ಬಹು ಮಾದರಿ ಲಾಜಿಸ್ಟಿಕ್ ಪಾರ್ಕ್ ಗೆ ಶಂಕುಸ್ಥಾಪನೆ

-ಮಧ್ಯಾಹ್ನ 2.30 ರಿಂದ 3.30 ರವರೆಗೆ ಜ್ಞಾನಭಾರತಿ ಆವರಣದಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಉದ್ಘಾಟನೆ, ಅಂಬೇಡ್ಕರ್ ಪ್ರತಿಮೆ ಅನಾವರಣ, 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐ ಗಳ ಲೋಕಾರ್ಪಣೆ

-ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಫ್ಟರ್ ಮೂಲಕ ಪ್ರಯಾಣ

-ಸಂಜೆ 4.50ಕ್ಕೆ ಮೈಸೂರಿಗೆ ಆಗಮನ

-ಸಂಜೆ 5 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಐಐಎಸ್ ಹೆಚ್ ಎಕ್ಸಲೆನ್ಸ್ ಸೆಂಟರ್ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ

-ಸಂಜೆ 6.30ಕ್ಕೆ ಸುತ್ತೂರು ಮಠಕ್ಕೆ ಭೇಟಿ, ವೇದ ಪಾಠಶಾಲಾ ಕಟ್ಟಡ ಲೋಕಾರ್ಪಣೆ

-ರಾತ್ರಿ 7.30 ಚಾಮುಂಡಿ ಬೆಟ್ಟಕ್ಕೆ ಭೇಟಿ

-ರಾತ್ರಿ 8.10ಕ್ಕೆ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ

-ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಮೈಸೂರು ಅರಮನೆ ಮುಂಭಾಗ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿ

-ಬೆಳಗ್ಗೆ 8 ಗಂಟೆಗೆ ಅರಮನೆ ಮುಂಭಾಗದಲ್ಲಿ ವಸ್ತು ಪ್ರದರ್ಶನ ವೀಕ್ಷಣೆ

-ಬೆಳಗ್ಗೆ 8.30ಕ್ಕೆ ಮೈಸೂರು ಅರಮನೆಗೆ ಭೇಟಿ

-ಬೆಳಗ್ಗೆ 9.25 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ತಿರುವನಂತಪುರಕ್ಕೆ ಪ್ರಯಾಣ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com