ಮುಂದುವರಿದ ಸಿಎಂ ಸಿಟಿ ರೌಂಡ್ಸ್: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪರಿಶೀಲನೆ

ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ನಗರ ಪ್ರದಕ್ಷಿಣೆ ತೀವ್ರಗೊಳಿಸಿದ್ದಾರೆ. ಇಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸಂಸದರು, ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರದಕ್ಷಿಣೆ ಹಾಕಿದ ಸಿಎಂ ಬೊಮ್ಮಾಯಿ ಅಧಿಕಾರಿಗಳಿಂದ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡರು. 
ನೂತನ ಲೋಕಾಯುಕ್ತರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಮುನ್ನ ಸಿಎಂ, ರಾಜ್ಯಪಾಲರು ಹಾಗೂ ಕಾಂಗ್ರೆಸ್ ನಾಯಕರ ಉಪಾಹಾರ ಕೂಟ
ನೂತನ ಲೋಕಾಯುಕ್ತರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಮುನ್ನ ಸಿಎಂ, ರಾಜ್ಯಪಾಲರು ಹಾಗೂ ಕಾಂಗ್ರೆಸ್ ನಾಯಕರ ಉಪಾಹಾರ ಕೂಟ
Updated on

ಬೆಂಗಳೂರು: ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ನಗರ ಪ್ರದಕ್ಷಿಣೆ ತೀವ್ರಗೊಳಿಸಿದ್ದಾರೆ. 

ಇಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸಂಸದರು, ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರದಕ್ಷಿಣೆ ಹಾಕಿದ ಸಿಎಂ ಬೊಮ್ಮಾಯಿ ಅಧಿಕಾರಿಗಳಿಂದ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡರು. 

ನಿನ್ನೆ ಮಂಗಳವಾರ ಸಂಜೆ ದಿಢೀರ್‌ ಬೆಂಗಳೂರು ಸಿಟಿ ರೌಂಡ್ಸ್‌ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟ ನಂತರ ಸಿಎಂ ಆ ಭಾಗದ ವಿವಿಧ ಕಾಮಗಾರಿಗಳ ಅನಿರೀಕ್ಷಿತ ತಪಾಸಣೆ ನಡೆಸಿದ್ದರು. ಹೊರವರ್ತುಲ ರಸ್ತೆ ಮತ್ತು ಕೆಲವು ಪ್ರಮುಖ ರಸ್ತೆಗಳ ಸಂಚಾರ ದಟ್ಟಣೆ ನಿವಾರಣೆಗಾಗಿ ಪ್ರಗತಿಯಲ್ಲಿರುವ ಕಾಮಗಾರಿಗಳ ಸ್ಥಳಗಳಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು.

ನಂತರ ಬಿಬಿಎಂಪಿ ಮುಖ್ಯ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಸರ್ಜಾಪುರ, ಮಾರತಹಳ್ಳಿ, ಎಚ್ ಎಸ್ ಆರ್ ಬಡಾವಣೆಗಳಿಗೆ ತೆರಳಿ ಕಾಮಗಾರಿಗಳ ವಸ್ತು ಸ್ಥಿತಿಯನ್ನು ಅರಿತು ಅಧಿಕಾರಿಗಳಿಗೆ ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸುವಂತೆ, ಮಾರತಹಳ್ಳಿ ಬ್ರಿಡ್ಜ್‌, ಕುಂದಲಹಳ್ಳಿ ಬಲಿಯ ಅಂಡರ್ ಪಾಸ್ ಕಾಮಗಾರಿಗಳನ್ನು ಪರಿಶೀಲಿಸಿದರು.

ವಾಹನ ದಟ್ಟಣೆ ಹೆಚ್ಚಿರುವುದರಿಂದ ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದರು. 

ಬಳಿಕ ಪಣತ್ತೂರು ರೈಲ್ವೆ ಕೆಳಸೇತುವೆ ಬಳಿ ರಸ್ತೆ ಅಗಲೀಕರಣ ಕಾಮಗಾರಿ, ಹೊಸದಾಗಿ ಆಸ್ಫಾಲ್ಟ್ ಮಾಡುತ್ತಿರುವ ವಿಎಸ್ಎಸ್ ರಸ್ತೆ, ಜಕ್ಕಸಂದ್ರ ರಸ್ತೆ ಮೊದಲಾದವುಗಳ ತಪಾಸಣೆ ನಡೆಸಿ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಆರ್‌ಟಿ ನಗರ ನಿವಾಸಕ್ಕೆ ಹಿಂದಿರುಗಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಬಿಬಿಎಂಪಿಯ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com