ನೂತನ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ

ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ
ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ
Updated on

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಇದಕ್ಕೂ ಮೊದಲು ಬಿಎಸ್ ಪಾಟೀಲ್ ಅವರು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧನೆ ಮಾಡಿದರು.

ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು.

ಲೋಕಾಯುಕ್ತರಾಗಿದ್ದ ನ್ಯಾಯಾಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಖಾಲಿ ಇದ್ದ ಹುದ್ದೆಗೆ 2019ರ ನವೆಂಬರ್ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾ. ಬಿ.ಎಸ್. ಪಾಟೀಲ್. ಅವರನ್ನು ನೂತನ ಲೋಕಾಯುಕ್ತರಾಗಿ ನೇಮಕ ಮಾಡಲಾಗಿದೆ

ಸಿದ್ದರಾಮಯ್ಯ ಶುಭಾಶಯ:
ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com