ಪೊಲೀಸರಿಂದ ರಕ್ತದಾನ
ಪೊಲೀಸರಿಂದ ರಕ್ತದಾನ

ಬೆಂಗಳೂರು: ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಆರಕ್ಷಕರು; ಐವರು ಪೊಲೀಸರಿಂದ ರಕ್ತದಾನ

ಇತ್ತೀಚೆಗೆ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ರಕ್ತದ ಅವಶ್ಯಕತೆ ಇದ್ದು, ಸಂತ್ರಸ್ತೆಗೆ ರಕ್ತ ದಾನ ಮಾಡುವ ಮೂಲಕ  ಐವರು ಪೊಲೀಸರು ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Published on

ಬೆಂಗಳೂರು: ಇತ್ತೀಚೆಗೆ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ರಕ್ತದ ಅವಶ್ಯಕತೆ ಇದ್ದು, ಸಂತ್ರಸ್ತೆಗೆ ರಕ್ತ ದಾನ ಮಾಡುವ ಮೂಲಕ  ಐವರು ಪೊಲೀಸರು ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆ್ಯಸಿಡ್ ದಾಳಿಯಿಂದ ತೀವ್ರ ಗಾಯಗೊಂಡು ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ 24 ವರ್ಷದ ಯುವತಿಯ ಶಸ್ತ್ರಚಿಕಿತ್ಸೆಗಾಗಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ರಕ್ತದಾನ ಮಾಡಿದ್ದು, ಇವರ ಕೆಲಸಕ್ಕೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪೋಷಕರ ನೋವಿಗೆ ಸ್ಪಂದಿಸಿದ ಪ್ರಶಾಂತ್, ಪ್ರೊಬೇಷನರಿ ಪಿಎಸ್‌ಐ ವಿಶ್ವನಾಥ್ ರೆಡ್ಡಿ, ಸಿಬ್ಬಂದಿ ಮೋಹನ್‌ಕುಮಾರ್, ಚಂದ್ರಯ್ಯ ಹಾಗೂ ನಟರಾಜ್ ಅವರು ಆಸ್ಪತ್ರೆಗೆ ಗುರುವಾರ ಹೋಗಿ ಐದು ಬಾಟಲಿ ರಕ್ತದಾನ ಮಾಡಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ  ಸಂಜೀವ್ ಪಾಟೀಲ್ ತಿಳಿಸಿದ್ದಾರೆ. ಆ್ಯಸಿಡ್ ದಾಳಿ ಪ್ರಕರಣದ ತನಿಖೆಯನ್ನು ಚುರುಕಿನಿಂದ ಮಾಡಿ ಆರೋಪಿಯನ್ನು ಬಂಧಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು, ಇದೀಗ ಸಂತ್ರಸ್ತ ಯುವತಿಗೆ ವೈದ್ಯರ ಸಲಹೆಯಂತೆ ರಕ್ತದಾನ ಮಾಡಿದ್ದಾರೆ. ಅಪರಾಧ ಭೇದಿಸುವುದಷ್ಟೇ ಅಲ್ಲ, ಸಾರ್ವಜನಿಕರ ಜೀವ ಉಳಿಸುವುದೂ ಪೊಲೀಸರ ಕೆಲಸ ಎಂಬುದನ್ನು ತೋರಿಸಿದ್ದಾರೆ’ ಎಂದು ಸಂಜೀವ್ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ತನ್ನನ್ನು ಮದುವೆಯಾಗಲು ನಿರಾಕರಿಸಿದರೆಂಬ ಕಾರಣಕ್ಕೆ ಆರೋಪಿ ನಾಗೇಶ್ ಬಾಬು (30) ಯುವತಿ ಮೇಲೆ ಏಪ್ರಿಲ್ 28ರಂದು ಆ್ಯಸಿಡ್ ಎರಚಿದ್ದ. ಆತನ ಕಾಲಿಗೆ ಗುಂಡು ಹೊಡೆದು, ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಗಾಯಾಳು ಯುವತಿಗೆ ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com