ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ವಿದ್ಯಾರ್ಥಿಗಳು ತೇರ್ಗಡೆ

ರಾಜ್ಯ ಪರವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ಪ್ರಸಕ್ತ 2022ನೇ ಸಾಲಿನ ದ್ವಿತೀಯ ಪಿಯುಸಿ(2nd PUC resuts) ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇಕಡಾ 61.88ರಷ್ಟು ಫಲಿತಾಂಶ ಬಂದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಪರವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ಪ್ರಸಕ್ತ 2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd PUC results) ಪ್ರಕಟಗೊಂಡಿದೆ. ಈ ಬಾರಿ ಶೇಕಡಾ 61.88ರಷ್ಟು ಫಲಿತಾಂಶ ಬಂದಿದೆ.

ಬೆಂಗಳೂರಿನಲ್ಲಿಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ವರ್ಷ ಒಟ್ಟು  6,83,563 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 

ವಿಜ್ಞಾನ ವಿಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇಕಡಾ 68.72ರಷ್ಟು ಬಾಲಕಿಯರು ಮತ್ತು ಶೇಕಡಾ 55.22ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ.

ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, ನಗರ ಪ್ರದೇಶದಲ್ಲಿ ಶೇಕಡಾ 61.78 ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಪೂರಕ ಪರೀಕ್ಷೆ ದಿನಾಂಕ ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುತ್ತದೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ,ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಿಣ ನಾಲ್ಕನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ ಹಾಗೂ ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಕಲಾ ವಿಭಾಗದಲ್ಲಿ 2,28,167 ಮಂದಿ, ವಾಣಿಜ್ಯ ವಿಭಾಗದಲ್ಲಿ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶೇ.72.53 ವಿಜ್ಞಾನ ವಿದ್ಯಾರ್ಥಿಗಳು, ಶೇ.64.97 ವಾಣಿಜ್ಯ, ಶೇ.48.71 ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com