ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಪ್ರತಿಷ್ಠಿತ 2022 ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಪ್ರಶಸ್ತಿ ಸಮಾರಂಭದಲ್ಲಿ ‘ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ’ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಪ್ರತಿಷ್ಠಿತ 2022 ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಪ್ರಶಸ್ತಿ ಸಮಾರಂಭದಲ್ಲಿ ‘ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ’ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಜಾಗತಿಕವಾಗಿ ನಡೆಸಿದ ಗ್ರಾಹಕರ ಸಮೀಕ್ಷೆಯನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ. "ಚೆಕ್-ಇನ್‌ನಿಂದ ಆಗಮನ, ವರ್ಗಾವಣೆಗಳು, ಶಾಪಿಂಗ್, ಭದ್ರತೆ, ವಲಸೆ, ಗೇಟ್‌ಗಳಲ್ಲಿ ನಿರ್ಗಮನದವರೆಗೆ, ಸಮೀಕ್ಷೆಯು ವಿಮಾನ ನಿಲ್ದಾಣ ಸೇವೆಯಾದ್ಯಂತ ಗ್ರಾಹಕರ ಅನುಭವ ಮತ್ತು ಪ್ರಮುಖ ಕಾರ್ಯಕ್ಷಮತೆಯ ಅಂಶಗಳನ್ನು ಮೌಲ್ಯಮಾಪನ ಆಧಾರದ ಮೇಲೆ ಪ್ರಶಸ್ತಿ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಸಮಾರಂಭವು ಪ್ಯಾರಿಸ್ನಲ್ಲಿ ನಡೆಯಿತು. ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ ಏರ್‌ಪೋರ್ಟ್ ಆಪರೇಟರ್‌ನ ಎಂಡಿ ಮತ್ತು ಸಿಇಒ ಹರಿ ಕೆ ಮಾರಾರ್, “ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಎಂಬ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ನಮಗೆ ಅಪಾರ ಸಂತೋಷವನ್ನು ತಂದಿದೆ. ನಾವು ಇನ್ನು ಹೆಚ್ಚಿನ ಸೌಲಭ್ಯ ಕೊಡಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಶ್ಲಾಘಿಸಿದ ಸ್ಕೈಟ್ರಾಕ್ಸ್‌ನ ಸಿಇಒ ಎಡ್ವರ್ಡ್ ಪ್ಲಾಸ್ಟೆಡ್ ಅವರು, ಕಳೆದ ಎರಡು ವರ್ಷಗಳಲ್ಲಿ ವಿಶ್ವಾದ್ಯಂತ ಇರುವ ವಿಮಾನ ನಿಲ್ದಾಣಗಳು ಭಾರಿ ಸಂಕಷ್ಟವನ್ನು ಅನುಭವಿಸಿವೆ. ಕೋವಿಡ್ -19 ನಿರ್ಬಂಧಗಳಿಂದ ಮತ್ತು ಪ್ರಯಾಣದ ಬೇಡಿಕೆಯಲ್ಲಿ ತೀವ್ರ ಕುಸಿತ ಎದುರಾಗಿತ್ತು. ಇದೀಗ ವಿಮಾನ ನಿಲ್ದಾಣಗಳು ತ್ವರಿತಗತಿಯಲ್ಲಿ ಸಾಮಾನ್ಯ ಸ್ಥಿತಿಗೆ ಮರಳಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅತ್ಯುನ್ನತ ಗುಣಮಟ್ಟ ತಲುಪುವ ಮಾನದಂಡಗಳನ್ನು ಮುಟ್ಟಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com