ಬೀದರ್: ಕೇಂದ್ರ ಸಚಿವ ಭಗವಂತ ಖೂಬಾಗೆ ಕರೆ ಮಾಡಿ ವಾಗ್ವಾದ ಮಾಡಿದ್ದ ಶಿಕ್ಷಕ ಅಮಾನತು

ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ದೂರವಾಣಿ ಕರೆ ಮಾಡಿ ವಾಗ್ವಾದ ನಡೆಸಿದ ಆರೋಪದ ಮೇಲೆ ತಾಲ್ಲೂಕಿನ ಜೀರ್ಗಾ (ಕೆ) ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಕುಶಾಲ ಪಾಟೀಲ ಅವ ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’
ಭಗವಂತ ಖೂಬಾ
ಭಗವಂತ ಖೂಬಾ

ಬೀದರ್: ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ದೂರವಾಣಿ ಕರೆ ಮಾಡಿ ವಾಗ್ವಾದ ನಡೆಸಿದ ಆರೋಪದ ಮೇಲೆ ತಾಲ್ಲೂಕಿನ ಜೀರ್ಗಾ (ಕೆ) ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಕುಶಾಲ ಪಾಟೀಲ ಅವ ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ನಗನೂರ ತಿಳಿಸಿದ್ದಾರೆ.

ಸಚಿವರ ಜೊತೆ ಅನುಚಿತವಾಗಿ ವರ್ತಿಸಿದ್ದು ಅಲ್ಲದೇ, ಅವರೊಂದಿಗಿನ ಸಂಭಾಷಣೆಯನ್ನು ರೆಕಾರ್ಡ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಾರಣ ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಹೆಡಗಾಪುರ ಗ್ರಾಮದ ಕುಶಾಲ ಪಾಟೀಲ, ಭಗವಂತ ಖೂಬಾ ಅವರಿಗೆ ಕರೆ ಮಾಡಿ, ‘ಊರಿನಲ್ಲಿ ಗೊಬ್ಬರ ಸಿಗುತ್ತಿಲ್ಲ. ರೈತರು ತೊಂದರೆಯಲ್ಲಿದ್ದಾರೆ. ಇದರಿಂದ ನಿಮ್ಮ ಹೆಸರು ಕೆಡುತ್ತಿದೆ. ಹೀಗಾದರೆ ಮುಂದಿನ ಚುನಾವಣೆಯಲ್ಲಿ ನಿಮಗೆ ಸಮಸ್ಯೆಯಾಗಲಿದೆ’ ಎಂದು ಹೇಳಿದ್ದರು. ಇದಕ್ಕೆ ಸಚಿವರು ಖಾರವಾಗಿ ಪ್ರತಿಕ್ರಿಯಿಸಿ, ‘ನಾನು ಕೇಂದ್ರ ಸಚಿವ, ಮನೆ ಮನೆಗೆ ಗೊಬ್ಬರ ಪೂರೈಸಲು ಆಗುವುದೇ’ ಎಂದು ಪ್ರಶ್ನಿಸಿದ್ದರು.ನಂತರ ರೈತ ಸಂಘಟನೆಗಳ ಪದಾಧಿಕಾರಿಗಳು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಕೇಂದ್ರ ಸಚಿವರೊಂದಿಗೆ ಶಿಕ್ಷಕ ಪಾಟೀಲ, ಸರ್ಕಾರಿ ನೌಕರರಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ ಹಾಗೂ ಸಚಿವರೊಂದಿಗೆ ಮಾತನಾಡಿದ ಆಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಕ್ಕೆ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ‌ ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com