ಬೆಳಗಾವಿ ಬಳಿ ಅಪಘಾತ: ಮೃತರ ಕುಟುಂಬಗಳಿಗೆ ತಲಾ ರೂ. 5 ಲಕ್ಷ ಪರಿಹಾರ ಪ್ರಕಟಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ ಬಳಿ ಇಂದು ಬೆಳಗ್ಗೆ  ಸಂಭವಿಸಿದ  ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Updated on: 

ಬೆಂಗಳೂರು: ಬೆಳಗಾವಿ ಬಳಿ ಇಂದು ಬೆಳಗ್ಗೆ  ಸಂಭವಿಸಿದ  ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕ್ರೂಸರ್  ಪಲ್ಟಿಯಿಂದ 7 ಮಂದಿ ಮೃತಪಟ್ಟಿರುವುದಕ್ಕೆ ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಬೆಳಂಬೆಳಿಗ್ಗೆ ಭೀಕರ ಅಪಘಾತ, ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಏಳು ಜನರ ದುರ್ಮರಣ
 

ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.  ಬೆಳಗಾವಿ ಬಳಿಯ  ಕಣಬರಗಿ ಸಮೀಪ ಇಂದು ಬೆಳಂಬೆಳಿಗ್ಗೆ ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com