ಬೆಂಗಳೂರು: ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 

ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿರುವ ಆರ್ ಡಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ 9 ವರ್ಷದ ನಿಶಿತಾ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಿಶಿತಾ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಇಂದು 1.30ರ ಸುಮಾರಿಗೆ ಏಕಾಏಕಿ ತರಗತಿಯಲ್ಲೇ ಕುಸಿದು ಬಿದ್ದಿದ್ದಳು. ಕೂಡಲೇ  ಶಾಲೆಯ ಶಿಕ್ಷಕರು ನಿಶಿತಾಳನ್ನು ಆಸ್ಪತ್ರೆಗೆ ಕರೆದೊಯ್ದರು. ನಿಶಿತಾಳನ್ನು ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು.

ನಿಶಿತಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರಾದ ನಾಗೇಂದ್ರ-ಸರಸ್ವತಿ ದಂಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com