ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಹಾಡು ಬಳಕೆ: ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್

ಕಾಂಗ್ರೆಸ್‌ ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಕೆಜಿಎಫ್‌-2  ಸಿನಿಮಾದ ಮ್ಯೂಸಿಕ್‌ ಬಳಸಿ ‘ಹಕ್ಕು ಸ್ವಾಮ್ಯ ಮತ್ತು ಬೌದ್ಧಿಕ ಆಸ್ತಿ ಹಕ್ಕು’ ಉಲ್ಲಂಘಿಸಿದ ಆರೋಪದಡಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಮೂವರ ವಿರುದ್ಧ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ರಾಹುಲ್ ಗಾಂಧಿ ಪಾದಯಾತ್ರೆ
ರಾಹುಲ್ ಗಾಂಧಿ ಪಾದಯಾತ್ರೆ

ಬೆಂಗಳೂರು: ಕಾಂಗ್ರೆಸ್‌ ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಕೆಜಿಎಫ್‌-2  ಸಿನಿಮಾದ ಮ್ಯೂಸಿಕ್‌ ಬಳಸಿ ‘ಹಕ್ಕು ಸ್ವಾಮ್ಯ ಮತ್ತು ಬೌದ್ಧಿಕ ಆಸ್ತಿ ಹಕ್ಕು’ ಉಲ್ಲಂಘಿಸಿದ ಆರೋಪದಡಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಮೂವರ ವಿರುದ್ಧ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಎಂಆರ್‌ಟಿ ಮ್ಯೂಸಿಕ್‌ ಕಂಪನಿಯ ಮುಖ್ಯಸ್ಥ ಎಂ.ನವೀನ್‌ ಕುಮಾರ್‌ ನೀಡಿದ ದೂರಿನ ಮೇರೆಗೆ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ಮತ್ತು ಪ್ರಚಾರ ಉಸ್ತುವಾರಿಯೂ ಆದ ಜೈರಾಮ್‌ ರಮೇಶ್‌, ಕಾಂಗ್ರೆಸ್‌ ಸೋಶಿಯಲ್‌ ಮಿಡಿಯಾ ಹಾಗೂ ಡಿಜಿಟೆಲ್‌ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರೀನೇತ್‌ ಹಾಗೂ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಈ ಸಂಬಂಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಎಂಆರ್‌ಟಿಸಿ ಮ್ಯೂಸಿಕ್‌ ಕಂಪನಿಯು ಕೆಜಿಎಫ್‌ ಸಿನಿಮಾದ ಹಿಂದಿ, ಕನ್ನಡ ಸೇರಿದಂತೆ ವಿವಿಧ ಭಾಷೆಗಳ ವಿಡಿಯೋ ಹಾಗೂ ಮ್ಯೂಸಿಕ್‌ ಹಕ್ಕು ಹೊಂದಿದೆ.

ಕಾಂಗ್ರೆಸ್‌ ಪಕ್ಷ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ನಮ್ಮ ಅನುಮತಿ ಪಡೆಯದೇ ಕೆಜಿಎಫ್‌ ಸಿನಿಮಾ ಮ್ಯೂಸಿಕ್‌ ಬಳಸಿಕೊಳ್ಳಲಾಗಿದೆ. ಕಾಂಗ್ರೆಸ್‌ನ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವಿಡಿಯೊ ಹಾಗೂ ಪೋಸ್ಟ್‌ ಹಾಕಲಾಗಿದೆ. ಈ ಮುಖಾಂತರ ಕಾಂಗ್ರೆಸ್‌ ತಮ್ಮ ಸ್ವಂತ ರಾಜಕೀಯ ಕಾರ್ಯಸೂಚಿಯನ್ನು ಮುಂದುವರೆಸಲು, ಮಾರ್ಕೆಟಿಂಗ್‌ ಹಾಗೂ ಪ್ರಚಾರಕ್ಕಾಗಿ ನಮ್ಮ ಹಕ್ಕು ಸ್ವಾಮ್ಯ ಹಾಗೂ ಬೌದ್ಧಿಕ ಆಸ್ತಿ ಹಕ್ಕನ್ನು ಉಲ್ಲಂಘಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com