ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರ ಸಾವು

ವಿದ್ಯುತ್ ತಂತಿ  ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ವಿದ್ಯುತ್ ತಂತಿ  ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ.

ವರದಿಗಳ ಪ್ರಕಾರ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ದೌಡಾಯಿಸಿದ್ದು ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com