ನ.11ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ: ಮೂರು ಕಾರ್ಯಕ್ರಮಗಳಲ್ಲಿ ಭಾಗಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 11ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈ ವೇಳೆ 3 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಅಂದೇ ರಾಷ್ಟ್ರ ರಾಜಧಾನಿ ದೆಹಲಿಗೆ ವಾಪಸ್ಸಾಗಲಿದ್ದಾರೆಂದು ತಿಳಿದುಬಂದಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 11ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈ ವೇಳೆ 3 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಅಂದೇ ರಾಷ್ಟ್ರ ರಾಜಧಾನಿ ದೆಹಲಿಗೆ ವಾಪಸ್ಸಾಗಲಿದ್ದಾರೆಂದು ತಿಳಿದುಬಂದಿದೆ.

ಪ್ರಧಾನಿ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದರು.

ಮುಂದಿನ ವರ್ಷ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ, ಇಂತಹ ಸಂದರ್ಭದಲ್ಲಿ ಮೋದಿ ಭೇಟಿ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಲಿದೆ ಎಂದು ಹೇಳಿದರು.

ನವೆಂಬರ್ 11ರ ಶುಕ್ರವಾರ ಬೆಂಗಳೂರಿನಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಶಾಸಕರ ಭವನದ ಆವರಣದಲ್ಲಿ ಕನಕದಾಸರ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ. ಬಳಿಕ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮ ಮೊದಲು ನಿಗದಿಯಾಗಿರಲಿಲ್ಲ. ಶಾಸಕರ ಒತ್ತಾಯದ ಬಳಿಕ ಇದನ್ನು ಕಾರ್ಯಕ್ರಮಗಳ ಪಟ್ಟಿಯಲ್ಲಿ ಸೇರಿಸಲಾಯಿತು ಎಂದು ತಿಳಿಸಿದರು.

ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ ನೀಡಲಿದ್ದಾರೆ. ಇದು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಾಗಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ರೈಲು 497 ಕಿ. ಮೀ. ದೂರವನ್ನು ಕೇವಲ 6 ಗಂಟೆ 40 ನಿಮಿಷದಲ್ಲಿ ಕ್ರಮಿಸಲಿದೆ. ಭಾರತದ 5ನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಇದಾಗಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಮಾಡಿರುವ 2ನೇ ಟರ್ಮಿನಲ್‌ ಅನ್ನು ಮೋದಿ ಉದ್ಘಾಟನೆ ಮಾಡಲಿದ್ದಾರೆ. ನಂತರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣಗೊಂಡಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಪ್ರತಿಮೆ ಲೋಕಾರ್ಪಣೆ ಮಾಡಿದ ಬಳಿಕ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಿದ್ದಾರೆಂದು ಮಾಹಿತಿ ನೀಡಿದರು.

ಅಂತರಾಷ್ಟ್ರೀಯ ಪ್ರಯಾಣಿಕರ ಓಡಾಟ ಹೆಚ್ಚಾಗಿರುವುದರಿಂದ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್ ಅಗತ್ಯವಿದೆ. ಹೊಸ ಟರ್ಮಿನಲ್ 25 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದ್ದು, ಇದು 100 ಕೌಂಟರ್‌ಗಳನ್ನು ಹೊಂದಿರುತ್ತದೆ.

ಟರ್ಮಿನಲ್ 1 ಮತ್ತು 2 ಅನ್ನು ಒಟ್ಟಿಗೆ ಸೇರಿಸಿದರೆ, ದೆಹಲಿ ವಿಮಾನ ನಿಲ್ದಾಣದ ನಂತರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದೇಶದ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣವಾಗಲಿದೆ. ಟರ್ಮಿನಲ್ 2 ರಾಜ್ಯದಲ್ಲಿ ಪ್ರವಾಸೋದ್ಯಮ ಮತ್ತು ಐಟಿ/ಬಿಟಿ ಮತ್ತು ಆರ್ & ಡಿ ಕ್ಷೇತ್ರಗಳನ್ನು ಒಳಗೊಂಡಂತೆ ಇತರ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com