ಹುಬ್ಬಳ್ಳಿ ಈದ್ಗಾ ಮೈದಾನ: ಟಿಪ್ಪು ಜಯಂತಿ ಸೇರಿ ಧಾರ್ಮಿಕ ಕಾರ್ಯಕ್ರಮಗಳಿಗೆ ಷರತ್ತುಬದ್ಧ ಅನುಮತಿ

ವಿವಾದಿತ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮಹಾನಗರ ಪಾಲಿಕೆ ಅನುಮತಿ ನೀಡಿದ್ದು, ಟಿಪ್ಪು ಜಯಂತಿ ಮಾತ್ರವಲ್ಲದೇ ಅರ್ಜಿ ಸಲ್ಲಿಸುವ ಎಲ್ಲಾ ಮಹಾಪುರುಷರ ಜಯಂತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹುಬ್ಬಳ್ಳಿ: ವಿವಾದಿತ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮಹಾನಗರ ಪಾಲಿಕೆ ಅನುಮತಿ ನೀಡಿದ್ದು, ಟಿಪ್ಪು ಜಯಂತಿ ಮಾತ್ರವಲ್ಲದೇ ಅರ್ಜಿ ಸಲ್ಲಿಸುವ ಎಲ್ಲಾ ಮಹಾಪುರುಷರ ಜಯಂತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರರ ಕಚೇರಿಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಪೌರ ಈರೇಶ ಅಂಚಟಗೇರಿ ಅವರು, ಹೈದರಾಬಾದ್ ರಾಜಕಾರಣಿ ಅಸಾದುದ್ದೀನ್ ಓವೈಸಿ ಅವರ ಪಕ್ಷ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷದ ಟಿಪ್ಪು ಸುಲ್ತಾನ್ ಜಯಂತಿ ಸೇರಿದಂತೆ ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸುವ ಎಲ್ಲಾ ಜಯಂತಿ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು. ಇದು ಸಾರ್ವಜನಿಕ ಆಸ್ತಿಯಾಗಿದ್ದು, ಈಗಾಗಲೇ ಗಣೇಶ ಮೂರ್ತಿ ಪ್ರತಿಷ್ಠಾನಪನೆಗೆ ಅವಕಾಶ ನೀಡಲಾಗಿತ್ತು. ಎಲ್ಲಾ ಸಮಾಜ ಹಾಗೂ ಧರ್ಮಗಳಿಗೆ ಮುಕ್ತ ಅವಕಾಶ ನೀಡಬೇಕು ಎನ್ನುವ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಂತೆಯೇ ಯಾರೇ ಅರ್ಜಿ ಸಲ್ಲಿಸಿದರೂ ಪರಿಶೀಲಿಸಿ ಷರತ್ತು ವಿಧಿಸಿ ಅವಕಾಶ ಕಲ್ಪಿಸಲಾಗುತ್ತದೆ. ನವೆಂಬರ್10 ರಂದು ನಡೆಯುವ ಟಿಪ್ಪು ಜಯಂತಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಗೃಹ ಸಚಿವರ ಪ್ರತಿಕ್ರಿಯೆ
ಇದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದ ವಿಷಯವಾಗಿದ್ದು, ಮೇಯರ್, ಕರ್ನಾಟಕದ ಮುಖ್ಯಮಂತ್ರಿಗಳು ಪರಿಶೀಲಿಸುತ್ತಾರೆ ಎಂದು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಪಕ್ಷಗಳ ವಿರೋಧ
ವಿಪಕ್ಷ ಹಾಗೂ ಕಾಂಗ್ರೆಸ್ ಸದಸ್ಯ ದೊರಾಜ ಮಣಿಕುಂಟ್ಲಾ ಹಾಗೂ ಎಐಎಂಐಎಂ ಪಕ್ಷದ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ಮಹಾಪೌರ ಘೋಷಣೆಗೆ ಸುದ್ದಿಗೋಷ್ಠಿಯಲ್ಲೇ ವಿರೋಧ ವ್ಯಕ್ತಪಡಿಸಿದರು. ಈದ್ಗಾ ಮೈದಾನ ಪವಿತ್ರ ಸ್ಥಳವಾಗಿದ್ದು, ಜಯಂತಿ ಸೇರಿದಂತೆ ಇತರೆ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದು ಸರಿಯಲ್ಲ. ಈ ಮೈದಾನದ ವಿವಾದಿಂದ ಮಹಾನಗರದ ಜನತೆ ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆ. ಹಿಂದೆ ಆದಂತಹ ಅನಾಹುತಗಳಿಗೆ ಅವಕಾಶ ನೀಡುವುದು ಬೇಡ. ಹೀಗಾಗಿ ಯಾವುದೇ ಆಚರಣೆಗೂ ಅವಕಾಶ ನೀಡಬಾರದು ಎಂದು ಮಹಾಪೌರರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದರು.

ಈದ್ಗಾ ಮೈದಾನಕ್ಕಾಗಿ ಸಂಘಟನೆಗಳ ಬೇಡಿಕೆ
ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿದ ಬೆನ್ನಲ್ಲೇ ಈದ್ಗಾ ಮೈದಾನದಲ್ಲಿ ಒನಕೆ ಓಬವ್ವ, ರತಿ ಮನ್ಮಥ ಪ್ರತಿಷ್ಠಾಪನೆಗೆ ಸಹ ಮನವಿ ಮಾಡಲಾಗಿದೆ. ಹುಬ್ಬಳ್ಳಿ ಧಾರಾವಾಡ ಮಹಾನಗರ ಪಾಲಿಕೆ ಪೌರಾಯುಕ್ತರಿಗೆ ಮತ್ತೆರಡು ಮನವಿ ಸಲ್ಲಿಕೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಗಜಾನನ ಮಹಾಮಂಡಳಿ ಹೋಳಿ ಆಚರಣೆಗೆ ಅವಕಾಶ ಕೇಳಿ ಮನವಿ ಸಲ್ಲಿಸಿದ್ದಾರೆ. ಮಾರ್ಚ್‌ನಲ್ಲಿ ರತಿ ಮನ್ಮಥ ಪ್ರತಿಷ್ಠಾಪನೆಗೆ ಎರಡು ದಿನ ಅವಕಾಶ ಕೇಳಿ ಮನವಿ ಸಲ್ಲಿಸಿರುವ ಸಲ್ಲಿಸಲಾಗಿದೆ. ಮತ್ತೊಂದು ಕಡೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಒನಕೆ ಓಬವ್ಬ ಜಯಂತಿಗೆ ಅವಕಾಶ ಕೇಳಿ ಮನವಿ‌ ಸಲ್ಲಿಸಿದ್ದಾರೆ. ಇದೇ ತಿಂಗಳು 11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಿಸಲು ಸಂಘಟಕರು ಅವಕಾಶ ಕೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com