ಕೋವಿಡ್-19 ಸಾಂದರ್ಭಿಕ ಚಿತ್ರ
ರಾಜ್ಯ
ತಗ್ಗಿದ ಕೊರೋನಾ: ಇಂದು ಬೆಂಗಳೂರಿನಲ್ಲಿ 37 ಸೇರಿ ರಾಜ್ಯದಲ್ಲಿ 74 ಮಂದಿಗೆ ಪಾಸಿಟಿವ್; ಒಂದು ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 74 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,70,272ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 74 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,70,272ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಸಾವನ್ನಪ್ಪಿದ್ದು ಇದರೊಂದಿಗೆ ಸಾವಿನ ಸಂಖ್ಯೆ 40,258ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 37 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,75,504ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 58 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,28,113ಕ್ಕೆ ಏರಿಕೆಯಾಗಿದೆ. ಇನ್ನು 1,858 ಸಕ್ರಿಯ ಪ್ರಕರಣಗಳಿವೆ.

