ಸುಪ್ರೀಂ ನ್ಯಾಯಾಧೀಶ ಎ.ಎಸ್.ಬೋಪಣ್ಣ
ಸುಪ್ರೀಂ ನ್ಯಾಯಾಧೀಶ ಎ.ಎಸ್.ಬೋಪಣ್ಣ

ಕೊಡಗು ಜಿಲ್ಲಾ ನ್ಯಾಯಾಲಯದ ಕಟ್ಟಡ ಉದ್ಘಾಟಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎ.ಎಸ್.ಬೋಪಣ್ಣ

ಮಡಿಕೇರಿಯ ಐತಿಹಾಸಿಕ ಜಿಲ್ಲಾ ನ್ಯಾಯಾಲಯದ ಕಟ್ಟಡವನ್ನು ಶನಿವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಉದ್ಘಾಟಿಸಿದರು.
Published on

ಮಡಿಕೇರಿ: ಮಡಿಕೇರಿಯ ಐತಿಹಾಸಿಕ ಜಿಲ್ಲಾ ನ್ಯಾಯಾಲಯದ ಕಟ್ಟಡವನ್ನು ಶನಿವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಉದ್ಘಾಟಿಸಿದರು.

39 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಭವ್ಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಎ.ಎಸ್.ಬೋಪಣ್ಣ ಅವರು, "ಜನರು ನ್ಯಾಯಾಂಗದ ಮೇಲೆ ನಂಬಿಕೆ ಕಳೆದುಕೊಂಡರೆ ಪ್ರಜಾಪ್ರಭುತ್ವದ ಕಲ್ಪನೆಯು ಕಳೆದುಹೋಗುತ್ತದೆ. ವಕೀಲರು ಇದನ್ನು ಗಮನದಲ್ಲಿಟ್ಟುಕೊಂಡು ಸಮಾಜದ ಒಳಿತಿಗಾಗಿ ಶ್ರಮಿಸಬೇಕು’ ಎಂದರು.

"ಸಮಯದೊಂದಿಗೆ ನ್ಯಾಯಾಲಯಗಳನ್ನು ನವೀಕರಿಸಲಾಗುತ್ತಿದೆ. ಇದು ಅಸ್ಥಿರ ಸಮಾಜವನ್ನು ಸೂಚಿಸುವುದಿಲ್ಲ. ಜನ ಇನ್ನೂ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿದ್ದಾರೆ ಮತ್ತು ಜನರ ಈ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಕೀಲರ ಕರ್ತವ್ಯವಾಗಿದೆ ಎಂದು ಹೇಳಿದರು.

<strong>ಜಿಲ್ಲಾ ನ್ಯಾಯಾಲಯದ ಕಟ್ಟಡ</strong>
ಜಿಲ್ಲಾ ನ್ಯಾಯಾಲಯದ ಕಟ್ಟಡ

ಸುಸಜ್ಜಿತ ನ್ಯಾಯಾಲಯ ಕಟ್ಟಡ ಸ್ಥಾಪನೆಗೆ ಜಿಲ್ಲೆಯ ಜನಪ್ರತಿನಿಧಿಗಳ ಶ್ರಮಕ್ಕೆ ನ್ಯಾಯಾಧೀಶ ಎ.ಎಸ್.ಬೋಪಣ್ಣ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರು ಕೊಡವ ಸಾಂಪ್ರದಾಯಿಕ 'ಬಾಳೋಪಾಟ್' ಹಾಡುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

“ಕೊಡಗು ಯೋಧರ ನಾಡು ಮತ್ತು ಈ ಜಿಲ್ಲೆಯು ಭಾರತೀಯ ಸೇನೆಗೆ ಅಪಾರ ಕೊಡುಗೆ ನೀಡಿದೆ. ಜಿಲ್ಲೆಯು ಪ್ರತಿಯೊಂದು ಕ್ಷೇತ್ರದಲ್ಲೂ ಛಾಪು ಮೂಡಿಸಿದ್ದು, ಜನರಲ್ ತಿಮ್ಮಯ್ಯ, ಕೆಎಂ ಕರಿಯಪ್ಪ ಅವರು ರಾಷ್ಟ್ರದ ಆಸ್ತಿಯಾಗಿದ್ದಾರೆ. ನ್ಯಾಯಾಲಯ ದೇವಾಲಯಕ್ಕೆ ಸಮಾನವಾಗಿದ್ದು, ಅಗತ್ಯವಿರುವ ಜನರಿಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ವರಾಳೆ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com