ಸರ್ಕಾರ ಭೂಮಿ ಕೊರತೆ ಸಮಸ್ಯೆ ಎದುರಿಸುತ್ತಿದ್ದು, 'ಕನ್ನಡ ಭವನ' ನಿರ್ಮಾಣಕ್ಕೆ ಭೂಮಿ ನೀಡಲು ಸಾಧ್ಯವಿಲ್ಲ: ಗೋವಾ ಸಿಎಂ ಸಾವಂತ್

ನಮ್ಮ ಸರ್ಕಾರ ಭೂಮಿ ಕೊರತೆ ಸಮಸ್ಯೆ ಎದುರಿಸುತ್ತಿದ್ದು, ಕನ್ನಡ ಭವನ ನಿರ್ಮಾಣಕ್ಕೆ ಭೂಮಿ ನೀಡಲು ಸಾಧ್ಯವಿಲ್ಲ. ಹೀಗಾಗಿ, ಕನ್ನಡಿಗರೇ ಜಾಗವನ್ನು ಖರೀದಿಸಿ, ಕನ್ನಡ ಭವನ ನಿರ್ಮಾಣ ಮಾಡಬಹುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹೇಳಿದ್ದಾರೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ಪಣಜಿ: ನಮ್ಮ ಸರ್ಕಾರ ಭೂಮಿ ಕೊರತೆ ಸಮಸ್ಯೆ ಎದುರಿಸುತ್ತಿದ್ದು, ಕನ್ನಡ ಭವನ ನಿರ್ಮಾಣಕ್ಕೆ ಭೂಮಿ ನೀಡಲು ಸಾಧ್ಯವಿಲ್ಲ. ಹೀಗಾಗಿ, ಕನ್ನಡಿಗರೇ ಜಾಗವನ್ನು ಖರೀದಿಸಿ, ಕನ್ನಡ ಭವನ ನಿರ್ಮಾಣ ಮಾಡಬಹುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹೇಳಿದ್ದಾರೆ.

ಗೋವಾದ ಬಿಚೋಲಿಯಲ್ಲಿ ನಡೆದ ಕಮ್ಮಡಿಗರ 14ನೇ ಸಾಂಸ್ಕೃತಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದು ಇಲ್ಲಿನ ಕನ್ನಡಿಗರ ಬೇಡಿಕೆಯಾಗಿದೆ ಎಂಬುದು ನಮಗೆ ತಿಳಿದಿದೆ. ಆದರೆ, ಇಲ್ಲಿನ ಸರ್ಕಾರದ ವತಿಯಿಂದ ಕನ್ನಡ ಭವನಕ್ಕೆ ಜಾಗ ನೀಡಲು ಸರ್ಕಾರದ ಬಳಿ ಅಷ್ಟೊಂದು ಜಾಗವಿಲ್ಲ. ಹೀಗಾಗಿ, ಕನ್ನಡಿಗರೇ ಜಾಗವನ್ನು ಖರೀದಿಸಿ, ಕನ್ನಡ ಭವನ ನಿರ್ಮಾಣ ಮಾಡಬಹುದು ಎಂದು ಹೇಳಿದ್ದಾರೆ.

“ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೋವಾದಲ್ಲಿನ ಕನ್ನಡಿಗರ ಸಮಸ್ಯೆಗಳ ಬಗ್ಗೆ ನನ್ನೊಂದಿಗೆ ಮಾತನಾಡುತ್ತಿರುತ್ತಾರೆ. ಅವರು ಕನ್ನಡ ಭವನದ ತಮ್ಮ ಬೇಡಿಕೆಯನ್ನು ನನ್ನ ಬಳಿ ಹೇಳಿಕೊಂಡಿದ್ದಾರೆ. ಆದರೆ, ಸರ್ಕಾರದ ಬಳಿ ಜಮೀನಿನ ಕೊರತೆಯಿದೆ. ನಿಮ್ಮಲ್ಲಿರುವ ಭೂಮಿಯಲ್ಲಿ ನೀವು ಭವನವನ್ನು ನಿರ್ಮಿಸಬಹುದು. ಅಥವಾ ನೀವೇ ಜಾಗ ಖರೀದಿಸಿ ಕನ್ನಡ ಭವನ ನಿರ್ಮಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com