ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವೇ?: ಬಿಜೆಪಿಗೆ ರಂದೀಪ್ ಸಿಂಗ್ ಸುರ್ಜೇವಾಲಾ ಪ್ರಶ್ನೆ

ರಾಜ್ಯದಲ್ಲಿ ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪ್ರಶ್ನೆ ಮಾಡಿದ್ದಾರೆ.
ರಂದೀಪ್ ಸಿಂಗ್ ಸುರ್ಜೇವಾಲಾ
ರಂದೀಪ್ ಸಿಂಗ್ ಸುರ್ಜೇವಾಲಾ
Updated on

ಬೆಂಗಳೂರು: ರಾಜ್ಯದಲ್ಲಿ ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪ್ರಶ್ನೆ ಮಾಡಿದ್ದಾರೆ.

ಮಂಡ್ಯದಲ್ಲಿ ರಸ್ತೆ‌ಗುಂಡಿಗೆ ನಿವೃತ್ತ ಯೋಧ ಬಲಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಸುರ್ಜೇವಾಲಾ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯ 40% ಸರ್ಕಾರ ಡಜನ್ ಗಟ್ಟಲೆ ಕನ್ನಡಿಗರನ್ಬು ಕೈಯಾರೆ ಬಲಿ ಪಡೆಯುತ್ತಿದೆ. ಮೋದಿ ಕರ್ನಾಟಕದ ಭೇಟಿಗೆ ಬೊಮ್ಮಾಯಿ ಸರ್ಕಾರ 10 ಕೋಟಿ ರೂ. ಖರ್ಚು ಮಾಡಿದೆ. ಇವಾಗ ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವಾ? ಎಂದು ಪ್ರಶ್ನಿಸಿದ್ದಾರೆ.

ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿವೃತ್ತ ಯೋಧ ಕೆಳಗೆ ಬಿದ್ದು ಮೃತಪಟ್ಟಿದ್ದರು. 12 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದ ಕುಮಾರ್, ನಿವೃತ್ತಿ ಬಳಿಕ ಕಾನ್ಸ್​​ಟೇಬಲ್​ ಹುದ್ದೆಗೆ ಆಯ್ಕೆ ಆಗಿದ್ದರು. ನವೆಂಬರ್ 13 ರಂದು ಮಂಡ್ಯದಿಂದ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com