ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು ಅವರದ್ದು: ಸಿಎಂ ಬೊಮ್ಮಾಯಿ

ಭಾರತವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಕೀರ್ತಿ ದೇಶದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದರು.
ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
Updated on

ಬೆಂಗಳೂರು: ಭಾರತವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಕೀರ್ತಿ ದೇಶದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದರು.

ನೆಹರು ಅವರ ಜನ್ಮದಿನದ ಪ್ರಯುಕ್ತ ಸೋಮವಾರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಪಂಡಿತ್ ಜವಾಹರಲಾಲ್ ನೆಹರೂ ಅವರು ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದವರು. ಭಾರತದ ಉದಯಕ್ಕೆ ಬಹಳಷ್ಟು ಪರಿಶ್ರಮ ಪಟ್ಟವರು ಎಂದು ಹೇಳಿದರು.

ಭಾರತದ ಮೊದಲ ಪ್ರಧಾನಿಯಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಪಾಯ ಹಾಕಿದವರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾನ್ ಅಲೈನ್ಮೆಂಟ್ ಮೂವ್ ಮೆಂಟ್ ಗೆ ಜನರಲ್ ಕಿಟೋ ಅವರೊಂದಿಗೆ ಸೇರಿ ಅವರ ಮಾಡಿರುವ ಕೆಲಸ ಅದ್ಭುತವಾಗಿದೆ. ಅಲಿಪ್ತ ಚಳುವಳಿ ಸಂಘದ ಮೂಲಕ ಭಾರತ ಇಂದಿಗೂ ತನ್ನ ಪ್ರಮುಖ ಪಾತ್ರವನ್ನು ವಹಿಸಿದೆ. ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com