ಸಂಗ್ರಹ ಚಿತ್ರ
ರಾಜ್ಯ
ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ಪೊಲೀಸರ ವಶಕ್ಕೆ
ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಚಿಲುಮೆ ಸಂಸ್ಥೆ ನಿರ್ದೇಶಕಿ ಆಗಿರುವ ರವಿಕುಮಾರ್ ಪತ್ನಿ ಐಶ್ವರ್ಯ ಹಾಗೂ ಟಿ.ಬೇಗೂರು ತೋಟದ ಮನೆಗೆ ದಾಖಲಾತಿ ಸಾಗಿಸಿದ್ದ ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಹಿತಿ ಆಧರಿಸಿ ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿದ್ದ ಹಲಸೂರು ಗೇಟ್ ಪೊಲೀಸರು ನಿನ್ನೆ ನಾಲ್ವರನ್ನು ವಶಕ್ಕೆ ಪಡೆದಿದ್ದರು. ಇಂದು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಗಳನ್ನ ಹಾಜರುಪಡಿಸಲಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ