ರಾಜ್ಯದ 5.86 ಲಕ್ಷ ವಿಶೇಷ ಚೇತನರಿಗೆ ವಿಶಿಷ್ಟ ಗುರುತಿನ ಚೀಟಿ ವಿತರಣೆ: ಡಾ. ಕೆ.ಸುಧಾಕರ್

ವಿಶೇಷ ಚೇತನರಿಗೆ  ವಿಶಿಷ್ಟ  ಗುರುತಿನ ಚೀಟಿಯ ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೂ 5.86 ಲಕ್ಷ ವಿಶೇಷ ಚೇತರಿಗೆ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಡಾ.ಕೆ. ಸುಧಾಕರ್
ಡಾ.ಕೆ. ಸುಧಾಕರ್
Updated on

ಬೆಂಗಳೂರು: ವಿಶೇಷ ಚೇತನರಿಗೆ  ವಿಶಿಷ್ಟ ಗುರುತಿನ ಚೀಟಿಯ ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೂ 5.86 ಲಕ್ಷ ವಿಶೇಷ ಚೇತರಿಗೆ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

ಯುಡಿಐಡಿ ಕಾರ್ಡ್ ವಿತರಣೆ ಪ್ರಕ್ರಿಯೆಯ ಪ್ರಗತಿ ಪರಶೀಲಿಸಿ ಮಾತನಾಡಿದ ಸಚಿವರು. ರಾಮನಗರ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಕಾರ್ಡ್ ಗಳು ವಿತರಣೆಯಾಗಿವೆ. ಚಿಕ್ಕಮಗಳೂರು ಎರಡನೇ ಸ್ಥಾನದಲ್ಲಿದ್ದು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ ಹಾಗೂ ಮಂಡ್ಯ ಜಿಲ್ಲೆಗಳು ನಂತರದ ಸ್ಥಾನಗಳಲ್ಲಿವೆ ಎಂದು ಸಚಿವರು ತಿಳಿಸಿದರು.

ಈ ಕಾರ್ಡ್ ಗಳ ಮೂಲಕ ಸರ್ಕಾರದಿಂದ ಹಲವಾರು ಸೌಲಭ್ಯ ಪಡೆಯಬಹುದಾಗಿದೆ. ಈ ಕಾರ್ಡ್ ನಿಂದ ಬ್ಲಾಕ್, ಜಿಲ್ಲಾ ಹಂತ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಎಲ್ಲಾ ಹಂತದ ಅನುಷ್ಠಾನ ಶ್ರೇಣಿಯಲ್ಲಿ ಫಲಾನುಭವಿಯ ಸೌಲಭ್ಯಗಳನ್ನು ಟ್ರ್ಯಾಕ್ ಮಾಡಲಾಗುವುದು, ಕಟ್ಟಕಡೆಯ ದಿವ್ಯಾಂಗರಿಗೂ ಕಾರ್ಡ್ ವಿತರಣೆ ಸರ್ಕಾರದ ಗುರಿಯಾಗಿದ್ದು, ಇದಕ್ಕಾಗಿ ಎಲ್ಲಾ ವಲಯಗಳಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು. 

ಅಂಗವೈಕ್ಯಲದಲ್ಲಿ ಈ ಹಿಂದೆ 7 ಬಗೆಯ ನ್ಯೂನತೆಗಳನ್ನು ಮಾತ್ರ ಪರಿಗಣಿಸಲಾಗುತಿತ್ತು, ಆದರೆ, 2016ರ ಆರ್ ಪಿ ಡಬ್ಲ್ಯೂಡಿ ಕಾಯ್ದೆಗೆ ತಿದ್ದುಪಡಿ ತಂದ ನಂತರ 21 ರೀತಿಯ ನ್ಯೂನತೆಗಳನ್ನು ಗುರುತಿಸಲಾಗಿದೆ. ವಿಶೇಷ ಚೇತನರ ವೈಯಕ್ತಿಕ ಹಾಗೂ ದೈಹಿಕ ನ್ಯೂನತೆಗಳ ಬಗ್ಗೆ  ದತ್ತಾಂಶ ಸಂಗ್ರಹಿಸಲಾಗುತ್ತಿದೆ. ಶೈಕ್ಷಣಿಕ, ಉದ್ಯೋಗ ವಿವರಗಳನ್ನು ಸಹ ಇದು ಒಳಗೊಂಡಿರಲಿದೆ. ಶೇ.40 ರಷ್ಟು ದೈಹಿಕ ನ್ಯೂನತೆ ಹೊಂದಿರುವವರನ್ನು ವಿಶೇಷ ಚೇತನರು ಎಂದು ಗುರುತಿಸಲಾಗುತ್ತಿದೆ. 2011ರ ಜನಗಣತಿ ವರದಿಯಂತೆ ದೇಶದಲ್ಲಿ ಶೇ. 2.21 ರಷ್ಟು ಮಂದಿ ಇಂತಹ ಸಮಸ್ಯೆ ಹೊಂದಿದ್ದಾರೆ ಎಂದು ಸಚಿವರು ತಿಳಿಸಿದರು.

ಅಂಗವೈಕಲ್ಯದಲ್ಲಿ ಈ ಹಿಂದೆ 7 ಬಗೆಯ ನ್ಯೂನತೆಗಳನ್ನು ಮಾತ್ರ ಪರಿಗಣಿಸಲಾಗುತ್ತಿತ್ತು. ಆದರೆ 2016 ರ ಆರ್.ಪಿ.ಡಬ್ಲ್ಯೂ.ಡಿ ಕಾಯ್ದೆಗೆ ತಿದ್ದುಪಡಿ ತಂದ ನಂತರ 21 ರೀತಿಯ ನ್ಯೂನತೆಗಳನ್ನು ಗುರುತಿಸಲಾಗಿದೆ. ವಿಶೇಷಚೇತನರ ವೈಯಕ್ತಿಕ ಮತ್ತು ದೈಹಿಕ ನ್ಯೂನತೆಗಳ ಬಗ್ಗೆ ದತ್ತಾಂಶ ಸಂಗ್ರಹಿಸಲಾಗುತ್ತಿದೆ. ಶೈಕ್ಷಣಿಕ, ಉದ್ಯೋಗ ವಿವರಗಳನ್ನು ಸಹ ಇದು ಒಳಗೊಂಡಿದೆ. ಶೇ.40 ರಷ್ಟು ದೈಹಿಕ ನ್ಯೂನತೆ ಹೊಂದಿರುವವರನ್ನು ವಿಶೇಷಚೇತನರು ಎಂದು ಗುರುತಿಸಲಾಗುತ್ತಿದೆ. 2011 ರ ಜನಗಣತಿ ವರದಿಯಂತೆ, ದೇಶದಲ್ಲಿ ಶೇ.2.21 ರಷ್ಟು ಮಂದಿ ಇಂತಹ ಸಮಸ್ಯೆಗಳನ್ನು ಹೊಂದಿದ್ದಾರೆ. ಇವರಿಗೆ ಸೌಲಭ್ಯಗಳನ್ನು ದೊರಕಿಸಿಕೊಡಲು ವಿಶೇಷ ಒತ್ತು ನೀಡಲಾಗಿದೆ ಎಂದು ಸುಧಾಕರ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com