ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ವಿದ್ಯಾರ್ಥಿ ವಿರುದ್ಧ ಪ್ರಕರಣ

ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯರ ಶೌಚಾಲಯಕ್ಕೆ ಇಣುಕಿ ನೋಡಿದ್ದಲ್ಲದೆ ವಿಡಿಯೋ ರೆಕಾರ್ಡ್ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
Published on

ಬೆಂಗಳೂರು: ಇಲ್ಲಿನ ಖಾಸಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯರ ಶೌಚಾಲಯಕ್ಕೆ ಇಣುಕಿ ನೋಡಿದ್ದಲ್ಲದೆ ವಿಡಿಯೋ ರೆಕಾರ್ಡ್ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ವಿಶ್ವವಿದ್ಯಾನಿಲಯದಲ್ಲಿ ಕಾನೂನು ವ್ಯಾಸಂಗ ಮಾಡುತ್ತಿರುವ 21 ವರ್ಷದ ವಿದ್ಯಾರ್ಥಿ ಮೇಲೆ ಇತ್ತೀಚೆಗೆ ಲೈಂಗಿಕ ಕಿರುಕುಳ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ವಿದ್ಯಾರ್ಥಿ ಈ ಹಿಂದೆ ಶೌಚಾಲಯದೊಳಗೆ ಇಣುಕಿ ನೋಡಿದಾಗ ಸಿಕ್ಕಿಬಿದ್ದಿದ್ದು, ಆತನಿಂದ ಕ್ಷಮಾಪಣೆ ಪತ್ರ ಬರೆಸಿಕೊಂಡ ನಂತರ ಎಚ್ಚರಿಕೆ ನೀಡಿ ಬಿಡಲಾಗಿತ್ತು.

ಆದರೆ, ವಿದ್ಯಾರ್ಥಿ ತನ್ನ ಮಾರ್ಗವನ್ನು ಸರಿಪಡಿಸಿಕೊಳ್ಳಲಿಲ್ಲ ಮತ್ತು ಎರಡು ದಿನಗಳ ನಂತರ ಮತ್ತೆ ತನ್ನ ಕೃತ್ಯವನ್ನು ಪುನರಾವರ್ತಿಸಿದ್ದಾನೆ. ಈ ವೇಳೆ ಪ್ರಕರಣವನ್ನು ಪೊಲೀಸರಿಗೆ ಒಪ್ಪಿಸಲು ಆಡಳಿತ ಮಂಡಳಿ ನಿರ್ಧರಿಸಿದೆ.

X

Advertisement

X
Kannada Prabha
www.kannadaprabha.com