ಗೋಪಾಲಸ್ವಾಮಿ ಆನೆ
ರಾಜ್ಯ
ಕಾಡಾನೆ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಸಾವು
ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ.
ಮೈಸೂರು: ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ.
ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆ ಜೊತೆಗೆ ಕಾದಾಟ ನಡೆಸಿ, ಗಂಭೀರವಾಗಿ ಗಾಯಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಈ ಬಾರಿಯ ದಸರಾದಲ್ಲಿ ಮರದ ಅಂಬಾರಿ ಹೊತ್ತಿದ್ದ ಗೋಪಾಲಸ್ವಾಮಿ 14 ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. ಅಲ್ಲದೇ, ಹುಲಿ, ಕಾಡಾನೆ ಸೆರೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಗೋಪಾಲಸ್ವಾಮಿ ಆನೆಯನ್ನು ಬಳಸುತ್ತಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ